Karnataka

ಫೆ.20 ಭದ್ರಾಜಲಾಶಯದಿಂದ ತುಂಗಭದ್ರಾ ನದಿಗೆ ನೀರು ನದಿ ಪಾತ್ರದ ಸಾರ್ವಜನಿಕರಿಗೆ ಎಚ್ಚರಿಕೆ

ದಾವಣಗೆರೆ. ಫೆ 20 : 2020-21 ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ಫೆ.20 ರಂದು ರಾತ್ರಿ 10:30 ಕ್ಕೆ ತುಂಗಾಭದ್ರಾ ನದಿಗೆ ಅವಶ್ಯಕತೆಗೆ ಅನುಗುಣವಾಗಿ ನೀರನ್ನು ಹರಿಸಲಾಗುವುದು.
ಆದುದರಿಂದ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ದನಕರುಗಳನ್ನು ನದಿಗೆ ಇಳಿಸುವುದಾಗಲೀ ಇತ್ಯಾದಿ ಚಟುವಟಿಕೆಗಾಗಿ ನದಿ ಪಾತ್ರದಲ್ಲಿ ನದಿಗೆ ಇಳಿಯುವಂತೆ ಎಚ್ಚರಿಕೆ ನೀಡಲಾಗಿದೆ ಮೇಲೆ ತಿಳಿಸಿದ ಅವಧಿಯಲ್ಲಿ ರೈತಬಾಂಧವರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್ಸೆಟ್‍ಗಳಿಂದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಮಿತಿ ಹಾಗೂ ಅಧೀಕ್ಷಕ ಅಭಿಯಂತರ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button

Adblock Detected

Please consider supporting us by disabling your ad blocker