ಸಿಸಿಬಿ ವಿಚಾರಣೆಗೆ ಹಾಜರಾದ ರಾಧಿಕಾ ಕುಮಾರಸ್ವಾಮಿ

ರಹಸ್ಯ ಬಿಚ್ಚಿಡಲಿದೆಯಾ ರಾಧಿಕಾ ಮೊಬೈಲ್‌?

0

ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಕುಮಾರಸ್ವಾಮಿ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ತಮ್ಮ ಸಹೋದರ ರವಿರಾಜ್‌ ಜೊತೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಹಾಜರಾಗಿದ್ದಾರೆ.

ರಾಜಕಾರಣಿಗಳು, ಸಿನಿಮಾ ಸ್ಟಾರ್‌ಗಳ ಹೆಸರೇಳಿಕೊಂಡು ಜನರಿಗೆ ಪಂಗನಾಮ ಹಾಕುತ್ತಿದ್ದ ಬಹುಕೋಟಿ ವಂಚಕ ಯುವರಾಜ್‌ @ ಸ್ವಾಮಿ ಜೊತೆಗೆ ಹಣಕಾಸಿನ ವ್ಯವಹಾರ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ರಾಧಿಕಾರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

BJP  Add

ಸಿಸಿಬಿ ಪೊಲೀಸರ ಸೂಚನೆ ಮೇರೆಗೆ ರಾಧಿಕಾ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಈಗಾಗಲೇ ನಟಿಯನ್ನು ತೀವ್ರ ವಿಚಾರಣೆಗೆ ಒಳ ಪಡಿಸಿರುವ ಅಧಿಕಾರಿಗಳು ನಟಿಯ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ವಂಚಕ ಯುವರಾಜ್‌ ಖಾತೆಯಿಂದ ರಾಧಿಕಾರ ಅಕೌಂಟ್‌ಗೆ ಸುಮಾರು 1 ಕೋಟಿಗೂ ಹೆಚ್ಚು ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಸಿಸಿಬಿ ಪೊಲೀಸರು ಇಂದು ನಟಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

- Advertisement -

Leave A Reply

Your email address will not be published.