Banking & Finance

SBI ಗ್ರಾಹಕರಿಗೊಂದು ಮಹತ್ವದ ಮಾಹಿತಿ: ಇಂದು ಮಧ್ಯಾಹ್ನದಿಂದ ಕೆಲ ಕಾಲ ವ್ಯತ್ಯಯವಾಗಲಿದೆ ಈ ಸೇವೆ

SBI ಗ್ರಾಹಕರಿಗೊಂದು ಮಹತ್ವದ ಮಾಹಿತಿ: ಇಂದು ಮಧ್ಯಾಹ್ನದಿಂದ ಕೆಲ ಕಾಲ ವ್ಯತ್ಯಯವಾಗಲಿದೆ ಈ ಸೇವೆ

ದೇಶದ ಅತಿ ದೊಡ್ಡ‌ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಗ್ರಾಹಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಏಪ್ರಿಲ್‌ 1 ರ ಇಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ನಿರ್ವಹಣಾ‌ ಕಾರ್ಯ ಕೈಗೊಂಡಿರುವ ಕಾರಣ ಬ್ಯಾಂಕಿನ ಹಲವು ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಲಾಗಿದೆ.

ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಮೂಲಕ ಈ ಮಾಹಿತಿಯನ್ನು ನೀಡಿದ್ದು, ನಿರ್ವಹಣೆ ಹಿನ್ನಲೆಯಲ್ಲಿ ಇಂಟರ್ನೆಟ್‌ ಬ್ಯಾಂಕಿಂಗ್‌/Yono/Yono Lite ಸೇವೆಗಳಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಿದೆ.

ಇಂದು ಮಧ್ಯಾಹ್ನ 2-10 ರಿಂದ ಸಂಜೆ 5-40 ರ ವರೆಗೆ ನಿರ್ವಹಣಾ ಕಾರ್ಯ ನಡೆಯಲಿರುವ ಹಿನ್ನಲೆಯಲ್ಲಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮೇಲ್ಕಂಡ ಬ್ಯಾಂಕಿಂಗ್‌ ಸೇವೆಗಳು ಲಭ್ಯವಿರುವುದಿಲ್ಲ ಎಂದು ತಿಳಿಸಲಾಗಿದೆ.

ಗ್ರಾಹಕರಿಗೆ ಸಾಮಾಜಿಕ ಜಾಲತಾಣ ವೇದಿಕೆಗಳ ಮೂಲಕ ಸದಾ ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಗ್ರಾಹಕರಿಗೆ ಸೇವೆಗಳು ಇನ್ನಷ್ಟು ಉತ್ತಮ ರೀತಿಯಲ್ಲಿ ಲಭ್ಯವಾಗಲು ನಿರ್ವಹಣೆ ಕೈಗೊಳ್ಳಲಾಗಿದೆ. ಹೀಗಾಗಿ ಇಂಟರ್ನೆಟ್‌ ಬ್ಯಾಂಕಿಂಗ್‌ ಸೇವೆಯನ್ನು ಉನ್ನತೀಕರಿಸಲಾಗುತ್ತಿದೆ ಎಂದಿದೆ.


Leave a Reply