NationalSports

ಕ್ರಿಕೇಟ್ ದೇವರಿಗೂ ಕೊರೋನಾ ಪಾಸಿಟಿವ್


ಮುಂಬೈ:  ದೇಶದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಟೀಂ ಇಂಡಿಯಾ ಮಾಜಿ ನಾಯಕ, ಕ್ರಿಕೇಟ್ ದೇವರು ಎಂದು ಹೆಸರು ಪಡೆದಿದ್ದ ಸಚಿನ್ ತೆಂಡೂಲ್ಕರ್ ಅವರಿಗೂ ಕೊರೊನಾ ದೃಡಪಟ್ಟಿದ್ದು ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಸ್ವತ: ಸಚಿನ್ ಮಾಹಿತಿ ನೀಡಿದ್ದು, ಕೋವಿಡ್ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ

ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಅವರು ಹೋಂ ಕ್ವಾರಂಟೈನ್ ನಲ್ಲಿದ್ದರು. ಈಗ ವೈದ್ಯರ ಸಲಹೆ ಮೇರೆಗೆ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

 


Leave a Reply