vijayapur

ಕೋವಿಡ್ ಪ್ರಕರಣಗಳು ಕಂಡು ಬಂದ ಪ್ರದೇಶವನ್ನು ಸೂಕ್ಷö್ಮ ನಿರ್ಬಂಧಿತ ಪ್ರದೇಶವೆಂದು ಘೋಷಣೆ


ವಿಜಯಪುರ ಏ. ೧೫ : ವಿಜಯಪುರ ನಗರದ ಬಿ. ಎಲ್. ಡಿ. ಇ. ವೈದ್ಯಕೀಯ ಮಹಾವಿದ್ಯಾಲಯದ ಹೊಸ ಕಿರಿಯ ವಿದ್ಯಾರ್ಥಿಗಳ ಹಾಸ್ಟೆಲ್ ( ಮೆಡಿಕಲ್ ) ಪ್ರದೇಶವನ್ನು ಕೋವಿಡ್ – ೧೯ ವೈರಾಣು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಈ ಪ್ರದೇಶವನ್ನು ಸೂಕ್ಷ್ಮ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವಿಜಯಪುರ ತಾಲೂಕು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ವಿಜಯಪುರ ನಗರ ಆರೋಗ್ಯ ಕೇಂದ್ರ ಎ.ಪಿ.ಎಂ.ಸಿ ವ್ಯಾಪ್ತಿಯಲ್ಲಿ ಬರುವ ಬಿ. ಎಲ್. ಡಿ. ಇ. ವೈದ್ಯಕೀಯ ಮಹಾವಿದ್ಯಾಲಯದ ಹಾಸ್ಟೆಲ್ ಪ್ರವೇಶದಲ್ಲಿ ದಿನಾಂಕ ೯ -೦೪ -೨೦೨೧ ರಂದು ಒಟ್ಟು ೫ ವಿದ್ಯಾರ್ಥಿಗಳಿಗೆ ಕೋವಿಡ್ – ೧೯ ಪ್ರಕರಣಗಳು ವರದಿಯಾಗಿರುವುದರಿಂದ ಈ ಪ್ರದೇಶವನ್ನು ಸೂಕ್ಷ್ಮ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply