State

ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ನಡೆಯಲಿವೆ: ಸುರೇಶ್ ಕುಮಾರ


ಚಾಮರಾಜನಗರ : ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ರಾಜ್ಯದಲ್ಲಿ ಪರೀಕ್ಷೆಗೆ ಇನ್ನೂ 2 ತಿಂಗಳು ಇದೆ. ಹೀಗಾಗಿ ಪರೀಕ್ಷೆ ರದ್ದು ಬಗ್ಗೆ ತೀರ್ಮಾನ ಮಾಡುವುದು ಈಗ ಬೇಡ. ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಸಂಬಂಧ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಮಾದ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ರಾಜ್ಯದಲ್ಲೂ ಎಸ್‌ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ

 


Leave a Reply