BengaluruState

ಲಾಕ್ ಡೌನ್ ಬಗ್ಗೆ ಏನಂದ್ರು ಸಿಎಂ ಸಾಹೆಬ್ರು..?!


ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ನಿಯಮಗಳ ಜಾರಿ ತುರ್ತು ಸಂದರ್ಭವಿದೆ. ಈಗಾಗಲೇ ಹಲವು ತಜ್ಞರೊಂದಿಗೆ ಚರ್ಚಿಸಲಾಗಿದೆ. ಕೊರೋನಾ ನಿಯಂತ್ರಣ ಕ್ರಮ ಕುರಿತಂತೆ ಸದ್ಯದಲ್ಲೇ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಭಾನುವಾರ ವಿಪಕ್ಷಗಳ ನಾಯಕರು ಸೇರಿದಂತೆ ಸರ್ವ ಪಕ್ಷ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿಯೂ ರಾಜ್ಯದಲ್ಲಿನ ಕೊರೋನಾ ನಿಯಂತ್ರಣಕ್ಕಾಗಿ ಕೈಗೊಳ್ಳ ಬಹುದಾದಂತ ಕ್ರಮಗಳ ಕುರಿತಂತೆ ಸಲಹೆಯನ್ನು ಪಡೆಯಲಾಗುತ್ತದೆ. ಇದಾದ ಬಳಿಕ ಮಂಗಳವಾರ ಸಚಿವರು, ಅಧಿಕಾರಿಗಳು, ತಜ್ಞರ ಸಭೆಯನ್ನು ಕರೆದಿದ್ದು, ಅಲ್ಲಿಯೂ ಸರ್ವ ಪಕ್ಷ ಸಭೆಯಲ್ಲಿ ನಾಯಕರು ನೀಡಿದಂತ ಸಲಹೆ ಕುರಿತಂತೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಟಫ್ ರೂಲ್ಸ್ ಅಂತೂ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೆ ತರಲಾಗುತ್ತಿದೆ ಎಂದರು.

ಈಗಾಗಲೇ 8 ಜಿಲ್ಲೆಗಳಲ್ಲಿ ಜಾರಿ ಮಾಡಲಾದ  ನೈಟ್ ಕರ್ಫ್ಯೂ ಎಪ್ರಿಲ್ 20 ವರೆಗೆ ಮುಂದುವರಿಸಲಾಗುತ್ತದೆ ಕೋವಿಡ್ ನಿಯಂತ್ರಣಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಆದ್ದರಿಂದ ನಮ್ಮ ರಾಜ್ಯದ ಪರಿಸ್ತಿತಿ ಭಿನ್ನವಾಗಿದ್ದು ನಮ್ಮ ರಾಜ್ಯವನ್ನ ಬೇರೆ ರಾಜ್ಯದೊಂದಿಗೆ ಹೊಲಿಕೆ ಮಾಡಬೇಡಿ ಎಂದರು.


Leave a Reply