BengaluruState

ಬಿಎಸ್ವೈಗೆ ಕೋವಿಡ್ ಹಿನ್ನೆಲೆ ಟ್ವಿಟರ್ ನಲ್ಲಿ ಕಾಂಗ್ರೆಸ್ ಟೀಕಾಪ್ರಹಾರ


ಬೆಂಗಳೂರು : ಜ್ವರ ಇದ್ದರೂ ಸಿಎಂ ಬಿ ಎಸ್‌ ಯಡಿಯೂರಪ್ಪ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ನಡೆಸಿರುವುದು ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್,, ಈ ಹಿಂದೆ ಕೊರೊನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಈತರದ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ. ಈ ಹಿಂದೆ ಕೊರೊನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಇಂತಹ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ ಎಂದು ಪ್ರಶ್ನೆ ಮಾಡಿದೆ.

ಅತ್ತ ಸಿಎಂ ಬಿಎಸ್ ವೈ ಅವರಿಗೆ 2ನೇ ಬಾರಿಗೆ ಕೋವಿಡ್ ಸೋಂಕು ತಗುಲಿ ಮಣಿಪಾಲ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಇತ್ತ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಮತ್ತು ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದೆ.

 


Leave a Reply