vijayapur

ಇಂದು ಬಸವನ ಬಾಗೇವಾಡಿಯಲ್ಲಿ ಡಿ.ದೇವರಾಜ ಅರಸು ಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ


ವಿಜಯಪುರ ) ಏ. ೧೬ : ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಾಡಳಿತ, ತಾ.ಪಂ ಹಾಗೂ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಾಳೆ ದಿ:೧೭-೦೪-೨೦೨೧ ರಂದು ಬೆಳಿಗ್ಗೆ ೧೧-೦೦ ಗಂಟೆಗೆ ಬಸವನ ಬಾಗೇವಾಡಿಯಲ್ಲಿ ಡಿ.ದೇವರಾಜ ಅರಸು ಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಲಿದೆ.
ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಉಪಸ್ಥಿತರಿರಲಿದ್ದು, ಶಾಸಕ ಶಿವಾನಂದ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ, ಶಾಸಕ ಎ.ಎಸ್ ಪಾಟೀಲ (ನಡಹಳ್ಳಿ) ಸಂಸದರಾದ ರಮೇಶ ಜಿಗಜಿಣಗಿ, ಜಿ,ಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಸೇರಿದಂತೆ ಇನ್ನೀತರ ಗಣ್ಯರು, ಮುಖಂಡರು ಹಾಗೂ ಅಧಿಕಾರಿಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


Leave a Reply