vijayapur

ಸಾಲ ಪಡೆದು ವಸತಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಸಲಹೆ


ವಿಜಯಪುರ ಏ. : ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಎ. ಎಚ್.ಪಿ. ಉಪಘಟಕದಡಿ ಜಿ +೧ ಮಾದರಿಯ ೧೪೯೩ ಗುಂಪು ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾದ ಹರ್ಷಾ ಶೆಟ್ಟಿ ಅವರು ತಿಳಿಸಿದ್ದಾರೆ.
ಆಯ್ಕೆಯಾದ ಫಲಾನುಭವಿಗಳಿಗೆ ವಂತಿಗೆ ಹಣ ಭರಣ ಮಾಡಲು ವಿವಿಧ ಬ್ಯಾಂಕುಗಳಿAದ ಸಾಲ ಸೌಲಭ್ಯ ನೀಡುತ್ತಿದ್ದು, ಸಾಲ ಪಡೆದುಕೊಂಡು ವಸತಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply