BengaluruState

ಮತದಾನ ಮಾಡಿ ನಿಮ್ಮ ಹಕ್ಕು ಚಲಾಯಿಸಿ: ಟ್ವಿಟ್ ಮೂಲಕ ಸಿಎಂ ಮನವಿ


ಬೆಂಗಳೂರು: ಇಂದು ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟ್ ಮಾಡುವುದರ ಮೂಲಕ ಮಾಡಿಕೊಂಡಿದ್ದಾರೆ.

ಕೊರೊನಾ ದೃಡಪಟ್ಟ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿಎಸ್ವೈ ಟ್ವಿಟ್ ಮೂಲಕ ಮತದಾರರಲ್ಲಿ ಮನವಿ ಮಾಡಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಆತ್ಮೀಯ ಮತದಾರ ಬಂಧುಗಳೇ, ಇಂದು ತಪ್ಪದೇ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಆಧಾರವೇ ಮತದಾನ, ಅದು ನಮ್ಮ ಹಕ್ಕೂ ಹೌದು, ಕರ್ತವ್ಯವೂ ಹೌದು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ನಿಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡಿ, ಪ್ರಜಾತಂತ್ರವನ್ನು ಬಲಪಡಿಸಿ ಎಂದು ಹೇಳಿದ್ದಾರೆ.


Leave a Reply