NationalNew Delhi

ರಾತ್ರಿ 8ಕ್ಕೆ ಅಧಿಕಾರಿಗಳೊಂದಿಗೆ ಮೋದಿ ಸಭೆ, ಲಾಕ್ ಡೌನ್ ಅಂತಾರಾ… ಬೇರೆ ನಿಯಮ ಜಾರಿಗೆ ತರ್ತಾರಾ?!


ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಬಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ವಿವಿಧ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಕೊರೋನಾ ಸ್ಥಿತಿಗತಿ ಮತ್ತು ಲಸಿಕೆ ಲಭ್ಯತೆ ಕುರಿತಾಗಿ ಪ್ರಧಾನಿ ಸಭೆ ನಡೆಸಲಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣ ಸದ್ಯದ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಈಗಾಗಲೇ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರೊಂದಿಗೆ ಮೋದಿ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಸಂವಾದ ನಡೆಸಿದ್ದಾರೆ. ದೇಶದಲ್ಲಿ ಸೋಂಕು ತೀವ್ರ ಏರಿಕೆ ಕಂಡಿದೆ. ಪ್ರತಿದಿನ ಎರಡು ಲಕ್ಷಕ್ಕೂ ಅಧಿಕ ಹೊಸ ಪ್ರಕರಣ ವರದಿಯಾಗುತ್ತಿದ್ದು, ಆಕ್ಸಿಜನ್ ಕೊರತೆ ಕಂಡುಬಂದಿದೆ.  ಈ ಎಲ್ಲ ಸಮಸ್ಯಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ ನಿರ್ದಾರ ಕೈಗೊಳ್ಳಲಿದ್ದು ಲಾಕ್ ಡೌನ್ ಮಾಡುತ್ತಾ..? ಇಲ್ಲವೆ ಹೊಸ ನಿಯಮಗಳನ್ನು ಜಾರಿಗೆ ತರುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

 


Leave a Reply