BengaluruState

ಜಿ.ಪಂ ಹಾಗೂ ತಾ.ಪಂ ಚುನಾವಣೆಗಳ ಮೇಲೂ ಕೋವಿಡ್ ಕರಿನೆರಳು

BIG NEWS: ಸಿಎಂ ವಿರುದ್ಧ ದೂರು ನೀಡಿದ್ದ ಸಚಿವ ಈಶ್ವರಪ್ಪ ರಾಜೀನಾಮೆ ವದಂತಿ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದೀಗ ರಾಜ್ಯದಲ್ಲಿ ಮುಂಬರಲಿದ್ದಂತ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಗಳ ಚುನಾವಣೆಗಳ ಮೇಲು ಅದರ ಕರಿನೆರಳು ಬಿದ್ದಿದ್ದು ಚುನಾವಣೆಗಳು ಮುಂದೂಡುವ ಸಾಧ್ಯತೆಗಳು ಹೆಚ್ಚಿವೆ.

ಈ ಕುರಿತು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ಜಿ.ಪಂ, ತಾ.ಪಂ ಚುನಾವಣೆ ಬರುತ್ತಿವೆ. ಕೋವಿಡ್ ಹೆಚ್ಚಳದಿಂದ ಚುನಾವಣೆ ಬೇಡವೆಂಬ ಸಲಹೆ ಇದೆ. ಹಾಗಾಗಿ ಸದ್ಯಕ್ಕೆ ಚುನಾವಣೆ ಮುಂದಕ್ಕೆ ಹಾಕಲು ಚಿಂತನೆ ನಡೆಸಲಾಗಿದೆ. ಸಂಪುಟ ಸಬ್ ಕಮಿಟಿ ಸಭೆಯಲ್ಲಿ ಚರ್ಚಿಸುತ್ತೇವೆ ನಂತರ ಇದರ ಬಗ್ಗೆ ಅಂತಿಮ ತೀರ್ಮಾನ ಮಾಡ್ತೇವೆ ಎಂದಿದ್ದಾರೆ.

ಅಧಿಕಾರ ಅವಧಿ ಮುಗಿದ ಕಡೆ ಆಡಳಿತಾಧಿಕಾರಿ ಹಾಕಬೇಕು. ಈ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ. ಕೋವಿಡ್ ಹೆಚ್ಚು ಉಲ್ಬಣವಾಗುತ್ತಿದೆ. ಮೂರುವರೆ ಕೋಟಿ ಜನ ಇದರಲ್ಲಿ ಭಾಗಿಯಾಗಬೇಕು. ಹಾಗಾಗಿ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯ ಇದೆ. ಇದನ್ನ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಆಯೋಗಕ್ಕೆ ಕಳಿಸುತ್ತೇವೆ ಎಂದರು.

ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆ ಕೊರೋನಾ ಸೋಂಕಿನ ಪ್ರಕರಣಗಳ ಹೆಚ್ಚಳ ಹಿನ್ನಲೆಯಲ್ಲಿ ಮುಂದೂಡಿಕೆ ಮಾಡುವ ಚಿಂತನೆ ಕೊನೆಯ ಹಂತದಲ್ಲಿದೆ. ಮುಂದೂಡಿಕೆ ಮಾಡಲು ಸರ್ಕಾರದ ಚಿಂತನೆ ನಡೆಸಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ನಂತರ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗುತ್ತದೆ. ಚುನಾವಣೆ ಮುಂದೂಡಿಕೆ ಬಗ್ಗೆ ನಮ್ಮ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಅವರು ಮುಂದೂಡಿಕೆ ಬಗ್ಗೆ ಸಲಹೆ ಕೊಟ್ಟಿದ್ದಾರೆ ಎಂದಿದ್ದಾರೆ.

 


Leave a Reply