BengaluruState

ಸಾರಿಗೆ ನೌಕರರಿಗೆ ಮತ್ತೊಂದು ಶಾಕ್.. 251 ತರಬೇತಿದಾರರನ್ನು ಆಯ್ಕೆ ಪಟ್ಟಿಯಿಂದ ಕೈಬಿಟ್ಟ ಇಲಾಖೆ


ಬೆಂಗಳೂರು : 6ನೇ ವೇತನ ಆಯೋಗದಂತೆ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದ್ದು ಸರಕಾರ ಮುಷ್ಕರ ನಿರತರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ.

ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಪ್ರತಿಭಟನೆಯಲ್ಲಿ ತೊಡಗಿದ್ದ ತರಬೇತಿ ಸಿಬ್ಬಂದಿಗಳನ್ನು ಅನಧಿಕೃತವಾಗಿ ಗೈರು ಕಾರಣದ ಮೇಲೆ 251 ಅಭ್ಯರ್ಥಿಗಳನ್ನು  ಕೆಎಸ್.ಆರ್.ಟಿಸಿ ತನ್ನ ಆಯ್ಕೆ ಪಟ್ಟಿಯಿಂದ ತೆಗೆದು ಹಾಕಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಷ್ಕರದಲ್ಲಿ ನಿರತರಾಗಿದ್ದ ತರಬೇತಿ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾಗ್ಯೂ, ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ.ಇದರಿಂದಾಗಿ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲು ಕಾರಣರಾಗಿರುತ್ತಾರೆ.

ಹೀಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಅನಧಿಕೃತವಾಗಿ ಗೈರು ಹಾಜರಾಗಿರುವಂತ 251 ತರಬೇತಿ ಸಿಬ್ಬಂದಿಗಳನ್ನು ಕೂಡಲೇ ಜಾರಿಗೆ ಬರುವಂತೆ ಆಯ್ಕೆ ಪಟ್ಟಿಯಿಂದ ತೆಗೆದುಹಾಕಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

 


Leave a Reply