BengaluruState

ಸತ್ಯಾಗ್ರಹಕ್ಕೆ ಮುಂದಾದ ಸಾರಿಗೆ ನೌಕರರು ಪೊಲೀಸರ ವಶ


ಬೆಂಗಳೂರು:  ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಸತ್ಯಾಗ್ರಹ ನಡೆಸಲು ಮುಂದಾದ ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾರಿಗೆ ನೌಕರರ ಸಂಘದ ಪದಾಕಾರಿಗಳು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಕೋವಿಡ್ ಹಿನ್ನಲೆಯಲ್ಲಿ ಮುಷ್ಕರಕ್ಕೆ ಅವಕಾಶವಿರದ ಕಾರಣ ಪ್ರತಿಭಟನೆಗೆ ಮುಂದಾದ ನೌಕರರನ್ನು ಪೊಲೀಸರು ವಶಕ್ಕೆ ಪಡೆದು ಮೈಸೂರು ರಸ್ತೆಯ ಸಿಎಆರ್ ಮೈದಾನಕ್ಕೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ.

ನಮ್ಮ ಬೇಡಿಕೆಗಳ ಈಡೇರಿಕೆಗೆ ಕಳೆದ 13 ದಿನಗಳಿಂದ ಮುಷ್ಕರ ಮಾಡುತ್ತಿದ್ದೇವೆ. ಸರ್ಕಾರ ನಮ್ಮನ್ನು ತಿರಸ್ಕಾರ ಮನೋಭಾವದಿಂದ ನೋಡುತ್ತಿದೆ. ಇಂದು ಕರೆ ಕೊಟ್ಟಿರುವ ಉಪವಾಸ ಸತ್ಯಾಗ್ರಹವನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ. ನಾಳೆ ಜೈಲ್‍ಭರೋ ಚಳವಳಿ ನಡೆಸುತ್ತಿವೆ ಎಂದು ಹೇಳಿದರು.


Leave a Reply