BengaluruState

ಕೋಡಿಹಳ್ಳಿ ಚಂದ್ರಶೇಖರ್ ಕರಪತ್ರಕ್ಕೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದೇನು..?


ಬೆಂಗಳೂರು: ಜನಸಾಮಾನ್ಯರ ಹಿತದೃಷ್ಟಿಯಿಂದ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಮಾತ್ರ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಹೇಳಿದ್ದೇನೆ. ಹೋರಾಟ ಮುಂದುವರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯನ್ನು ಮಾಡಿಲ್ಲ. ೬ ನೇ ವೇತನ ಆಯೋಗದ ಬಗ್ಗೆ ಯಾವುದೇ ಭರವಸೆ ನೀಡಿರುವುದಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ತಿಳಿಸುತ್ತೇನೆ ಎಂದು ಮಾತ್ರ ಹೇಳಿದ್ದೇನೆ. ಹೀಗಾಗಿ ಸಾರಿಗೆ ನೌಕರರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಈ ಸ್ಪಷ್ಟೀಕರಣ ನೀಡುತ್ತೇನೆ.

ಕೋಡಿಹಳ್ಳಿ ಚಂದ್ರಶೇಖರ್ ಅವರು ಇಂದು ಮುಂಜಾನೆ ತಮ್ಮನ್ನು ಭೇಟಿ ಮಾಡಿದ್ದರು. ಆ ಸಂದರ್ಭದಲ್ಲಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ್ದೇನೆ . ಇದು ಮುಷ್ಕರ ನಡೆಸಲು ಸೂಕ್ತ ಸಂದರ್ಭ ಅಲ್ಲ. ಕೋವಿಡ್ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮುಷ್ಕರವನ್ನು ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಮಾತ್ರ ನಾನು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದೇನೆ.

ನಾನು ಈ ಮೇಲ್ಕಂಡ ವಿಷಯವನ್ನು ಮಾತ್ರ ಅವರಿಗೆ ತಿಳಿಸಿರುತ್ತೇನೆ. ಆದರೆ ಕೋಡಿಹಳ್ಳಿ ಚಂದ್ರಶೇಖರ್ ಅವರ ಕರಪತ್ರ ಇದಕ್ಕೆ ವ್ಯತಿರಿಕ್ತವಾಗಿದೆ. ಇದರಿಂದ ಸಾರಿಗೆ ನೌಕರರಿಗೆ ತಪ್ಪು ಸಂದೇಶ ರವಾನೆಯಾಗಬಾರದು. ಹೀಗಾಗಿ ಈ ಸ್ಪಷ್ಟೀಕರಣವನ್ನು ಕೊಡಲು ಬಯಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Leave a Reply