BengaluruState

ರಾಜ್ಯಪಾಲರ ಸಭೆ, ಸರಕಾರದ ಮೇಲೆ ಟ್ವಿಟರ್ ವಾರ್ ಮಾಡಿದ ಕಾಂಗ್ರೆಸ್


ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಊಹೆಗೂ ಮೀರಿ ಹೆಚ್ಚುತ್ತಿದ್ದು ಸರಕಾರಕ್ಕೆ ಸಂದಿಗ್ದ ಪರಿಸ್ಥಿತಿ ಬಂದೊದಗಿದೆ. ಆಸ್ಪತ್ರೆಗಳಲ್ಲಿ ಬೆಡ್ ಮತ್ತು ವೆಂಟಿಲೇಟರ್ ಸಿಗದೇ ಸೋಂಕಿತರು ಪರದಾಡುತ್ತಿದ್ದರೆ ಮತ್ತೊಂದು ಚಿತಾಗಾರದಲ್ಲಿ ಕಡೆ ಶವಗಳನ್ನು ಸುಡಲು ಸರದಿಯಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಇಂದು ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿದ್ದು ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಟ್ವಟರ್ ನಲ್ಲಿ ಟೀಕಾ ಪ್ರಹಾರ ನಡೆಸುತ್ತಿದೆ.

ಈ ಕುರಿತುಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ? ಸರ್ಕಾರದ ಅಸಮರ್ಥ್ಯವೇ ಅಥವಾ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನದ ಬಾಗವೇ? ಸರ್ಕಾರಕ್ಕೆ ವಿಪಕ್ಷಗಳನ್ನು ಎದುರಿಸುವ ಮುಖವಿಲ್ಲವೇ? ಅಥವಾ ಪರಿಸ್ಥಿತಿ ಎದುರಿಸಲಾಗದೆ ಕೈ ಚೆಲ್ಲಿದೆಯೇ? ಇಂತಹ ಮುಖಹೇಡಿ ಸರ್ಕಾರದಿಂದ ಜನರ ಜೀವ ಉಳಿಸುವುದು ಸಾಧ್ಯವಿಲ್ಲ ಎಂದು ಟ್ವಿಟರ್ ಮೂಲಕ ಸರಕಾರದ ಮೇಲೆ ವಾರ್ ಮಾಡಿದೆ.


Leave a Reply