ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ : ಸಿಎಂ

ಬೆಂಗಳೂರು : ಸಚಿವ ಸ್ಥಾನದ ಜಾತಕ ಪಕ್ಷಿಯಂತೆ ಕಾಯುತ್ತಿರುವ ಆಕಾಂಕ್ಷಿಗಳಿಗೆ ಸಂಕ್ರಾಂತಿ ಹಬ್ಬಕ್ಕೆ ಸಿಹಿಸುದ್ದಿ ಇದ್ದು, ಸಂಕ್ರಾಂತಿ ಹಬ್ಬದ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಿ ತೆರಳಿದ್ದರೂ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಜನವರಿ 16,17 ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಈ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯಲಿದೆ.
ಸದ್ಯ ಖಾಲಿ ಇರುವ ಸಚಿವ ಸ್ಥಾನಗಳಿಗೆ ಎಂಟಿಬಿ ನಾಗರಾಜ್, ಆರ್. ಶಂಕರ್, ಮುನಿರತ್ನ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದ್ದು, ಉಳಿದಂತೆ ಮೂಲ ಬಿಜೆಪಿಗರ ಪೈಕಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಸಿಪಿ ಯೋಗೇಶ್ವರ್ ಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.