BengaluruState

ಕೋವಿಡ್ ಕರಿನೆರಳು, 1ರಿಂದ 9ನೇ ತರಗತಿಗಳಿಗಿಲ್ಲ ಪರೀಕ್ಷೆ


ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿಯೂ ತನ್ನ ಪ್ರಭಾವ ಬೀರುತ್ತದೆ. ವಿದ್ಯಾರ್ಥಿಗಳ ರೋಗ್ಯವನ್ನು ಗಮದಲ್ಲಿಟ್ಟುಕೊಂಡು  1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳನ್ನು ರದ್ದು ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ.

ಈ ಕುರಿತು ಮಾಹಿತಿ ನೀಡಿರುವ  ಶಿಕ್ಷಣ ಸಚಿವ ಸುರೇಶ್ ಕುಮಾರ್  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಕೈಮೀರುತ್ತಿದ್ದು ಸೋಕಿತರ ಸಂಖ್ಯೆ ಏರಿಕೆಯಾಗುತ್ತಿದೆ ಆದ್ದರಿಂದ ವಿದ್ಯಾರ್ಥಿಗಳ ರೋಗ್ಯದ ಕಡೆಗೆ ಗಮನ ಹರಿಸುವುದು ಅನಿವಾರ್ಯವಾಗಿದ್ದು  1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳಿಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ. ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 1-9ನೇ ತರಗತಿವರೆಗೆ ಮೌಲ್ಯಾಂಕನ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ

 


Leave a Reply