BelagaviState

ಕೋವಿಡ್ ನಿಯಂತ್ರಣದಲ್ಲಿ ಸರಕಾರ ವಿಫಲವಾಗಿದೆ: ಸತೀಶ್ ಜಾರಕಿಹೊಳಿ


ಬೆಳಗಾವಿ: ‘ಕೋವಿಡ್-19 ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ನಾಲ್ವರು ಮಂತ್ರಿಗಳಿದ್ದರೂ ಏನು ಪ್ರಯೋಜನ? ಇಲ್ಲಿಯವರೆಗೂ ಒಂದು ಸಭೆಯನ್ನೂ ಅವರು ನಡೆಸಿಲ್ಲ. ಸೋಂಕು ಹರಡದಂತೆ ನೋಡಿಕೊಳ್ಳುವುದಕ್ಕೆ ಆದ್ಯತೆ ಕೊಟ್ಟಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜಿಲ್ಲಾ ಉಸ್ತುವಾರಿ ಮಂತ್ರಿಯೇ ಬೇಕು ಅಂತಿಲ್ಲ. ಇತರ ನಾಲ್ವರು ಸಚಿವರು ಜಿಲ್ಲೆಯವರೇ ಆಗಿದ್ದಾರೆ. ಅವರ ಮೇಲೆ ಜವಾಬ್ದಾರಿ ಇದೆ. ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲವೆಂದು ಕೈಚೆಲ್ಲಿ ಕುಳಿತುಕೊಳ್ಳದೆ ಜಿಲ್ಲೆಯ ಬಗ್ಗೆ ಕಾಳಜಿ ವಹಿಸಬೇಕು. ಒಮ್ಮತದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದರು.

ಎಂಇಎಸ್ ಅಭ್ಯರ್ಥಿ ಸ್ಪರ್ಧೆ ಮಾಡಿರುವುದು ನಮಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ನಮ್ಮ ಮತಗಳು ನಮಗೆ ಇರುತ್ತವೆ. ಎಂಇಎಸ್ ಚುನಾವಣೆಗೆ ಸ್ಪರ್ಧೆ ಮಾಡುವುದು ಹೊಸತೇನಲ್ಲ. ಪ್ರತಿ ಬಾರಿಯಂತೆ ಅವರು ಈ ಬಾರಿಯೂ ಮಾಡಿದ್ದಾರೆ. ಅದರ ಪರಿಣಾಮ‌ ಏನೂ ನಮಗೆ ಬಿರದು ಎಂದರು.

ರಾಜ್ಯದಲ್ಲಿ ದಿನೆದಿನೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ ಅವರು ಲಾಕ್ಡೌನ್ ಮಾಡಬಾರದು. ಈಗಾಗಲೆ ಲಾಕ್ ಡೌನ್ ಮಾಡಿದರಿಂದ ಜನರಿಗೆ ಆದಾಯ ಇಲ್ಲದಂತಾಗಿದೆ.‌ಲಾಕ್ ಡೌನ್ ಮಾಡಿದರೆ ಸಣ್ಣ ಪುಟ್ಟ ಕಾರ್ಖಾನೆಗಳಿಗೆ ನಷ್ಟ ಆಗಲಿದೆ ಇದರಿಂದಾಗಿ ಜನರು ಉಧ್ಯೊಗ ನಷ್ಟ ಅನುಭವಿಸುವಂತಾಗುತ್ತೆ ಎಂದು ಅವರು ತಿಳಿಸಿದರು.‌

ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದಿರುವ ವಿಚಾರವಾಗಿ ಮಾತನಾಡಿದ ಅವರು, ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವರು ಇರಬೇಕು ಎಂಬುವುದೆನಿಲ್ಲ.‌ ಜಿಲ್ಲೆಯಲ್ಲಿ ಇರುವ ಮಂತ್ರಿಗಳು ಒಮ್ಮತದಿಂದ ಬಂದು ಕೋವಿಡ್ ನಿಯಂತ್ರಣಕ್ಕಾಗಿ ಸಭೆ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ರಾಜು ಸೇಠ್, ಜಿಲ್ಲಾ ‍ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಮುಖಂಡ ಸುನೀಲ ಹನಮನ್ನವರ ಇದ್ದರು.

 

 

 


Leave a Reply