BengaluruState

ವಿಧಾನ ಮಂಡಲ, ವಿಧಾನಸಭೆಯ ಸಭೆಗಳೂ ಬಂದ್ ಬಂದ್ ಬಂದ್…


ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕಂಟಕ ಮುಂದುವರೆದಿದ್ದು ದಿನದಿಮದ ದಿನಕ್ಕೆ ಪ್ರಕರಣಗಳು ಹೆಚ್ಚುತ್ತಿವೆ ಈ ಹಿನ್ನೆಲೆ ವಿಧಾನ ಮಂಡಲ, ವಿಧಾನಸಭೆಯ ಸದಸ್ಯರ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಮಿತಿಗಳ ಸಭೆಗಳನ್ನು ರದ್ದು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇದಕ್ಕೆ ಸಂಬಂದಿಸಿದಂತೆ  ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ(ಪ್ರ) ಎಂ.ಕೆ.ವಿಶಾಲಾಕ್ಷಿ ಪ್ರಕಟಣೆ ಹೊರಡಿಸಿದ್ದು, ಕೊರೋನಾ ವೈರಸ್ನ 2ನೇ ಅಲೆಯು ದೇಶದಲ್ಲಿ, ಅದರಲ್ಲಿಯೂ ವಿಶೇಷವಾಗಿ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಸದಸ್ಯರುಗಳ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಗಳನ್ನು ದಿನಾಂಕ 26-04-2021ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಲು ಸಭಾಧ್ಯಕ್ಷರು ಆದೇಶಿಸಿರುತ್ತಾರೆಂದು ತಿಳಿಸಿದ್ದಾರೆ.

 


Leave a Reply