BengaluruState

ಖಾಕಿ ಪಡೆಗೂ ವಕ್ಕರಿಸಿದ ಕೊರೊನಾ, ರಾಜ್ಯದಲ್ಲಿ ಸೋಂಕಿತ ಪೊಲೀಸರ ಸಂಖ್ಯೆ ಎಷ್ಟು..?


ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯವೇ ತತ್ತರಿಸುತ್ತಿದೆ. ಕೋವಿಡ್ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದ್ದು ಬೆಂಗಳೂರಿನ ಪೊಲೀಸರೂ ಕೂಡ ಸೋಂಕಿಗೆ ಬಲಿಯಾಗುತ್ತಿದ್ದಾರೆ.

ಕೋವಿಡ್ ಎರಡನೇ ಅಲೆಗೆ ಪೊಲೀಸ್ ಇಲಾಖೆಯು ತತ್ತರಿಸಿದ್ದು ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ ಮೂವರು ಪೊಲೀಸರು ಬಲಿಯಾಗಿದ್ದಾರೆ, 193 ಸಿಬ್ಬಂದಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ 193 ಪೊಲೀಸ್ ಸಿಬ್ಬಂದಿ ಹೋಂ ಕ್ವಾರಂಟೈನ್ ಆಗಿದ್ದಾರೆ. ಇನ್ನು 10 ಪೊಲೀಸರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕು ಪೊಲೀಸ್ ಸಿಬ್ಬಂದಿಗಳಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಿರ್ದೇಶನದ ಮೇರೆಗೆ ಆಯುಕ್ತರ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲು ನಿರ್ಧರಿಸಲಾಗಿದೆ. ಈ ಮೂಲಕ ಇಲಾಖೆ ಸಿಬ್ಬಂದಿಗಳಲ್ಲಿ ಸೋಂಕು ಕಂಡುಬಂದರೆ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.


Leave a Reply