Belagavi

ಕೋವಿಡ್-೧೯ ಹಿನ್ನಲೆ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ ಮುಂದೂಡಿಕೆ


ಬೆಳಗಾವಿ, ಏ.೨೧ : ಕರ್ನಾಟಕ ಲೋಕಸೇವಾ ಆಯೋಗವು ಏ.೨೨ ರಿಂದ ಏ.೩೦ರವರೆಗೆ ನಡೆಯಬೇಕಿದ್ದ ೨೦೨೦ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಮುಂದೂಡಿದೆ ಎಂದು ಆಯೋಗದ ಕಾರ್ಯದರ್ಶಿಗಳಾದ ಜಿ.ಸತ್ಯವತಿ ಅವರು ತಿಳಿಸಿದ್ದಾರೆ.
ಈ ಪರೀಕ್ಷೆಗಳಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅಭ್ಯರ್ಥಿಗಳು ಏ.೨೨ ರಿಂದ ಏ.೨೮ ರವರೆಗೆ ಬೆಂಗಳೂರು ಪರೀಕ್ಷಾ ಕೇಂದ್ರಕ್ಕೆ ಹಾಗೂ ಏ.೨೯ ಮತ್ತು ಏ.೩೦ರ ವಿಭಾಗೀಯ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಾಗಬೇಕಾಗಿತ್ತು.
ಕೋವಿಡ್-೧೯ ಸಾಂಕ್ರಾಮಿಕ ರೋಗಾಣು ಹರಡುವಿಕೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದರಿಂದ ಹಾಗೂ ಏ.೨೦ ರಂದು ಸರ್ಕಾರ ಹೊರಡಿಸಿದ ಆದೇಶ ಸಂ.ಆರ್‌ಡಿ ೧೫೮ ಟಿಎನ್‌ಆರ್ ೨೦೨೦ ಮಾರ್ಗಸೂಚಿ ಅನ್ವಯ ಏ.೨೧ ರಿಂದ ಮೇ.೦೪ ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ಹಿನ್ನಲೆಯಲ್ಲಿ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಮುAದಿನ ಪರೀಕ್ಷಾ ದಿನಾಂಕಗಳನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲ hಣಣಠಿ://ಞಠಿsಛಿ.ಞಚಿಡಿ.ಟಿiಛಿ.iಟಿ ದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳಾದ ಜಿ.ಸತ್ಯವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply