Gadag

ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ಮುಂದೂಡಿಕೆ


ಗದಗ   21: ಕರ್ನಾಟಕ ಲೋಕಸೇವಾ  ಆಯೋಗವು ಎಪ್ರಿಲ್ 22 ರಿಂದ 30ರವರೆಗೆ  2020 ನೇ ಸಾಲಿನ ವಿತ್ತೀಯ ಅಧಿವೇಶನ ಇಲಾಖಾ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು. ಸದರಿ ಪರೀಕ್ಷೆಗಳಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಅಭ್ಯರ್ಥಿಗಳು ಎಪ್ರಿಲ್ 22 ರಿಂದ 28 ರವರೆಗೆ ಬೆಂಗಳೂರು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಾಗುತ್ತದೆ. ಹಾಗೂ ಎಪ್ರಿಲ್ 29 ರಿಂದ 30 ರವರೆಗೆ ವಿಭಾಗೀಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಹಾಜರಾಗಬೇಕಾಗುತ್ತದೆ.  ಕೋವಿಡ್-19 ಸಾಂಕ್ರಾಮಿಕ ರೋಗಾಣು ಹರಡುವಿಕೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದರಿಂದ ಹಾಗೂ ಸರ್ಕಾರದ ಆದೇಶದನ್ವಯ  ಎಪ್ರಿಲ್ 21 ರಿಂದ  ಮೇ 4 ರವರೆಗೆ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಎಪ್ರಿಲ್ 22 ರಿಂದ 30 ರವರೆಗೆ ನಡೆಯಬೇಕಿದ್ದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.  ಮುಂದಿನ ದಿನಾಂಕವನ್ನು ನಂತರ  ದಿನಗಳಲ್ಲಿ ಆಯೋಗದ ಅಂತರ್ಜಾಲದಲ್ಲಿ   http://kpsc.kar.nic.in  ನಲ್ಲಿ  ಪ್ರಕಟಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.


Leave a Reply