Gadag

ಕೊರೋನಾ ಸೋಂಕು ನಿಯಂತ್ರಣ ಮತ್ತು ಲಸಿಕಾಕರಣ ಸಭೆ ತಾಲೂಕಾ ಆಸ್ಪತ್ರೆಗಳಲ್ಲಿ ಮೂಲಸೌರ‍್ಯದೊಂದಿಗೆ ಸೋಂಕಿತರಿಗೆ ಚಿಕಿತ್ಸೆ ಒದಗಿಸಿ


ಗದಗ  ಎ.21: ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌರ‍್ಯದೊಂದಿಗೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ (ಮಂಗಳವಾರ) ಜರುಗಿದ ತಾಲೂಕಾ ವೈದ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿಗಳ ಕೋವಿಡ್ ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ಜಿಲ್ಲಾದ್ಯಂತ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ 500 ಬೆಡ್ ಸಾಮರ್ಥ್ಯ ವ್ಯವಸ್ಥೆ ಮಾಡಲಾಗಿದೆ. ಸೋಂಕಿತರ ಪ್ರಮಾಣ ಅಧಿಕಗೊಳ್ಳುತ್ತಿದ್ದು ಸೋಂಕಿತರನ್ನು ಸ್ಥಳೀಯ ಆಸ್ಪತ್ರೆಯಲ್ಲಿಯೇ ಅಥವಾ ಹೋಮ್‌ಐಸೋಲೇಶನ್‌ನಲ್ಲಿ ಚಿಕಿತ್ಸೆ ಒದಗಿಸಬೇಕು. ಸೋಂಕಿತರ ಆರೋಗ್ಯ ಸ್ಥಿತಿಗನುಸಾರವಾಗಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಮಾತ್ರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಬೇಕು. ಹೋಮ್ ಐಸೋಲೇಶನ್ ನಲ್ಲಿರುವ ಸೋಂಕಿತರ ಚಿಕಿತ್ಸೆಗೆ ಔಷಧಿಗಳ ಕಿಟ್ ತಯಾರಿಸಿ ವಿತರಿಸುವ ಕಾರ್ಯ ಮಾಡಬೇಕು. ಅಲ್ಲದೇ ಹೋಮ್ ಐಸೋಲೇ಼ಶನ್‌ನಲ್ಲಿರುವವರ ಮೇಲೆ ಕಾಲಕಾಲಕ್ಕೆ ಆರೋಗ್ಯ ವಿಚಾರಿಸುವುದರೊಂದಿಗೆ ನಿಗಾ ವಹಿಸಬೇಕೆಂದು ತಿಳಿಸಿದರು.
ಸೋಂಕಿತರಿಗೆ ಆಸ್ಪತ್ರೆಯಲ್ಲಿ ಉತ್ತಮ ಆಹಾರ, ಶುದ್ಧ ಕುಡಿಯುವ ನೀರು, ಉತ್ತಮ ಬೆಡ್ ವ್ಯವಸ್ಥೆ,   ಬಿಸಿ ನೀರು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಸೋಂಕಿತರ ಚಿಕಿತ್ಸೆಗಾಗಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳಾದ ಪಿಪಿಇ ಕಿಟ್, ಮಾಸ್ಕ್ ಸ್ಯಾನಿಟೈಜರ್, ಎಂಬುಲೆನ್ಸ್ಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಎಂಬುಲೆನ್ಸ್ಗಳು ದಿನದ 24 ಗಂಟೆಯೂ ಲಭ್ಯವಾಗುವಂತೆ ಕ್ರಮ ಜರುಗಿಸಬೇಕು. ಜಿಲ್ಲೆಯ ಯಾವೊಬ್ಬ ಸೋಂಕಿತರು ಚಿಕಿತ್ಸೆಯಿಂದ ವಂಚಿತರಾಗಬಾರದು ಎಂದರು.
ಹೋಮ್‌ಐಸೋಲೇಶನ್‌ನಲ್ಲಿರುವವರ ಬಗ್ಗೆ ಆಸ್ಪತ್ರೆಯ ಸೋಂಕಿತರ ಚಿಕಿತ್ಸೆಗೆ ಇರುವ ಸಾಮರ್ಥ್ಯ, ಸಿಬ್ಬಂದಿಗಳ ವಿವರ, ಮೂಲಭೂತ ಸೌಲಭ್ಯಗಳ ಬಗ್ಗೆ ನಿಯೋಜಿತರ ನೋಡಲ್ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ 2 ದಿನದಲ್ಲಿ ವರದಿ ನೀಡಬೇಕೆಂದು ತಾಕೀತು ಮಾಡಿದರು.  ಸೋಂಕು ಅಧಿಕವಾದಲ್ಲಿ ಕೋವಿಡ್ ಕೇರ್‌ಸೆಂಟರ್‌ಗಳನ್ನು ಆರಂಭಿಸುವ ಬಗ್ಗೆ ಮೊದಲೇ ಸಿದ್ಧತೆ ಮಾಡಿಕೊಳ್ಳಬೇಕು. ಕೋವಿಡ್ ಸೋಂಕಿನ ನಿರ್ವಹಣೆ ಹಾಗೂ ಚಿಕಿತ್ಸೆಗೆ ಆಯುಷ್ ಇಲಾಖೆಯ ವೈದ್ಯರನ್ನು ಅಗತ್ಯವಿದಲ್ಲಿ ನಿಯೋಜಿಸಿ ಸೇವೆ ಪಡೆಯುವಂತೆ ಸೂಚಿಸಿದರು.
ರೆಮಿಡಿಸಿವರ್:  ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ರೆಮಿಡಿಸಿವರ್ ಚುಚ್ಚುಮದ್ದಿನ ಸಂಗ್ರಹ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ರೆಮಿಡಿಸಿವರ್ ಚುಚ್ಚುಮದ್ದು ಜಿಲ್ಲೆಯಲ್ಲಿ ಅಗತ್ಯಕ್ಕೆ ತಕ್ಕಷ್ಟು ಸಂಗ್ರಹವಿದೆ. ನಿಯಮಿತವಾಗಿ ಚುಚ್ಚುಮದ್ದನ್ನು ಬಳಸಬೇಕು.
   ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ ನಿಯೋಜಿತ ವೈದ್ಯಾಧಿಕಾರಿಗಳು ಸೋಂಕಿತರ ಚಿಕಿತ್ಸೆ ನೀಡುವಲ್ಲಿ ನಿಷ್ಕಾಳಜಿ ತೋರದೇ ಸರಿಯಾಗಿ ಕಾರ್ಯನಿರ್ವಹಣೆ ಮಾಡಬೇಕು.ಸೋಂಕಿತರ ಚಿಕಿತ್ಸೆಗಾಗಿ ಅಗತ್ಯವಿರುವ ಔಷಧಿ ಸಾಮಗ್ರಿಗಳ ಕೊರತೆಯಿಲ್ಲ. ಮೂಲಭೂತ ಸೌಲಭ್ಯಗಳ ಅಗತ್ಯವಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬೇಕೆAದು ಸೂಚಿಸಿದರು.
ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಎಂ.ಗೊಜನೂರ ಮಾತನಾಡಿ ಜಿಲ್ಲಾದ್ಯಂತ 45 ವರ್ಷ ಮೇಲ್ಪಟ್ಟ ಎಲ್ಲರಿಗೂಲಸಿಕೆ ನೀಡಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ 5500 ಡೋಸ್ ಕೋವ್ಯಾಕ್ಸಿನ್ ಹಾಗೂ 3500 ಕೋವಿಶೀಲ್ಡ್ ಲಸಿಕೆ ಲಭ್ಯವಿದೆ. ಅಗತ್ಯಕ್ಕನುಸಾರ ಜಿಲ್ಲೆಗೆ ಲಸಿಕೆ ಸಂಗ್ರಹ ಮಾಡಿಟ್ಟುಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ, ತಾಲೂಕಾ ವೈದ್ಯಾಧಿಕಾರಿಗಳು,  ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳು,  ಆಯುಷ್ ಇಲಾಖೆ ಅಧಿಕಾರಿ ಡಾ. ಸುಜಾತಾ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ, ಸೇರಿದಂತೆ  ಆಸ್ಪತ್ರೆಗಳ ಮುಖ್ಯಸ್ಥರು ಇದ್ದರು.


Leave a Reply