Gadag

ಕೋವಿಡ್ ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸಿದ ನೂತನ ಮಾರ್ಗಸೂಚಿಗಳ ಪಾಲನೆ ಅನಿವಾರ್ಯ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು


ಗದಗ ಎಪ್ರಿಲ್ 21: ಕೋರೋನಾ ಸೊಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸಿದ ನೂತನ ಮಾರ್ಗಸೂಚಿ ನಿಯಮಗಳು ಏಪ್ರೀಲ್ 21 ರ ರಾತ್ರಿ 9 ಗಂಟೆಯಿಂದ ಜಿಲ್ಲೆಯಲ್ಲಿ ಜಾರಿಯಾಗಲಿದೆ. ಗದಗ ಜಿಲ್ಲೆಯ ಎಲ್ಲಾ ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನೂತನ ಮಾರ್ಗಸೂಚಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ಮೂಲಕ ಸೊಂಕು ನಿಯಂತ್ರಣಕ್ಕೆ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಜಿ.ಪಂ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಬುಧವಾರ ಸಂಜೆ ನಡೆದ ಕೋವಿಡ್-19 ರ ನೂತನ ಮಾರ್ಗಸೂಚಿ ಅನುಷ್ಠಾನ ಕುರಿತು ವಿಡಿಯೋ ಸಂವಾದದಲ್ಲಿ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.

ಏಪ್ರೀಲ್ 21 ರಿಂದ ಮೇ 4 ರವರೆಗೆ ನೈಟ್ ಕಫ್ರ್ಯೂ ರಾತ್ರಿ 9 ರಿಂದ ಬೆಳಿಗ್ಗೆ 6 ಗಂಟೆಯವರೆಗಿದ್ದು, ವಾರಾಂತ್ಯ ಕಫ್ರ್ಯೂ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಇರಲಿದೆ. ಸಾರ್ವಜನಿಕರಿಗೆ ನಿಯಮಗಳ ಬಗ್ಗೆ ತಿಳುವಳಿಕೆ ನೀಡಿ, ಉಲ್ಲಂಘಿಸುವವರ ಮೇಲೆ ದಂಡ ವಿಧಿಸಿ ಪ್ರಕರಣ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸೂನತ ಕೋವಿಡ್-19 ಮಾರ್ಗಸೂಚಿಗಳ ಸರಿಯಾದ ಪಾಲನೆಯಾಗಬೇಕು. ಗ್ರಾಮೀಣ ಜನರಲ್ಲಿ ಸೋಂಕು ಹರಡುವಿಕೆ ತಡೆಯಲು ನಿಯಮಗಳ ಪಾಲನೆ ಕಡ್ಡಾಯವಾಗಿದೆ. ತಾ.ಪಂ ಅಧಿಕಾರಿಗಳು ಹಾಗೂ ಪಿ.ಡಿ.ಓ ಸೇರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ಹಾಕುವಂತೆ ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿ ಜರುಗುವ ವಾರದ ಸಂತೆಗಳನ್ನು ವಿಶಾಲವಾದ ಮೈದಾನದಲ್ಲಿ ಏರ್ಪಡಿಸಬೇಕು. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸುವಂತೆ ನಿಗಾ ವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶ ಕುಮಾರ ಎಂ, ಎಸಿ ರಾಯಪ್ಪ ಹುಣಸಗಿ, ತಹಶೀಲ್ದಾರರು, ತಾಪಂ ಇಓ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.


Leave a Reply