BengaluruState

ಕೋವಿಡ್ ವಿರುದ್ಧ ಗೆದ್ದು ಬಂದ ರಾಜಾಹುಲಿ


ಬೆಂಗಳೂರು: ಕೊರೊನಾ 2ನೇ ಅಲೆ ದೃಡಪಟ್ಟ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಉಪಚುನಾವಣೆಯಲ್ಲಿ ಪ್ರಚಾರದಲ್ಲಿ ಭಾಗವಹಿಸಿದ ಬಳಿಕ ಯಡಿಯೂರಪ್ಪ ಅವರಿಗೆ ಕೋವಿಡ್ ದೃಡಪಟ್ಟಿತ್ತು ಏಪ್ರಿಲ್ 16ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಬಳಿಕ ಇದೀಗ ಗುಣಮುಖರಾಗಿರುವ ಮುಖ್ಯಮಂತ್ರಿಗಳಿಗೆ ಕೋವಿಡ್ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಆಸ್ಪತ್ರೆಯಿಂದ ನೇರವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಗೆ ತೆರಳಿದ್ದಾರೆ.

ಈ ಸಂದರ್ಭದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಕೊರೊನಾ ಸೋಂಕು ರಾಜ್ಯಾದ್ಯಂತ ವೇಗವಾಗಿ ಹರಡುತ್ತಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಳ್ಳಿ, ಅನಗತ್ಯವಾಗಿ ಹೊರಗಡೆ ಓಡಾಡಬೇಡಿ. ಕರ್ಫ್ಯೂ ನಿಯಮಗಳನ್ನು ಪಾಲಿಸಿ ಎಂದರು. ಗುರುವಾರ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ನೈಟ್ ಕರ್ಫ್ಯೂ, ಹೊಸ ಮಾರ್ಗಸೂಚಿ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದರು.

 


Leave a Reply