BengaluruState

ಚಿತಾಗಾರ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ಘೋಷಿಸಿದ ಬಿಬಿಎಂಪಿ


ಬೆಂಗಳೂರು : ಬೆಂಗಳೂರಿನ ಚಿತಾಗಾರ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡಲು ಬಿಬಿಎಂಪಿ ಮುಂದಾಗಿದ್ದು  ಗುಡ್ ನ್ಯೂಸ್ ಕೊಟ್ಟಿದೆ.

ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇರುವ ಹಿನ್ನೆಲೆ  ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು, ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಲು ಚಿತಾಗಾರ ಸಿಬ್ಬಂದಿ ಮೃತರ ಕುಟುಂಬಗಳಿಂದ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿತ್ತು ಇದರಿಮದ ಮೃತರ ಕುಟುಂಬಸ್ಥರಿಗೆ ತೊಂದರೆಯಾಗಬಾರದೆಂದು ಚಿತಾಗಾರದ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡಲು ಬಿಬಿಎಂಪಿ ನಿರ್ಧರಿಸಿದೆ.

ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಮುಂದಿನ 2 ತಿಂಗಳ ಕಾಲ ಚಿತಾಗಾರದ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಕೋವಿಡ್ ನಿರ್ವಹಣೆಗಾಗಿ ರಾಜ್ಯ ಸರ್ಕಾರವು ಬಿಬಿಎಂಪಿಗೆ 305 ಕೋಟಿ ರೂ. ಅನುದಾನ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಕೂಡಲೇ ಚಿತಾಗಾರದ ಸಿಬ್ಬಂದಿಗೆ ಪ್ರೋತ್ಸಾಹ ಧನ ನೀಡಲು ಬಿಬಿಎಂಪಿ ಮುಂದಾಗಿದೆ.


Leave a Reply