vijayapur

ಪ್ರಧಾನ ಮಂತ್ರಿ ಮತ್ಸö್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನ


ವಿಜಯಪುರ ಏ. ೨೩ : ೨೦೨೧-೨೨ ನೇ ಸಾಲಿನ ಪ್ರಧಾನ ಮಂತ್ರಿ ಮತ್ಸö್ಯ ಸಂಪದ ಯೊಜನೆಯಡಿ ವಿವಿಧ ಕಾರ್ಯಕ್ರಮಗಳ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನುಗಾರಿಕೆ ಇಲಾಖೆಯ ವತಿಯಿಂದ ೨೦೨೦-೨೧ ನೇ ಸಾಲಿನಿಂದ ೨೦೨೪-೨೫ ನೇ ಸಾಲಿನ ವರೆಗೆ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತದೆ ಎಂದು ವಿಜಯಪುರ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
೨೦೨೧-೨೨ ನೇ ಸಾಲಿನ ಯೋಜನೆ ಪ್ರಯುಕ್ತ ಒಳನಾಡು ಮೀನುಗಾರಿಕೆಗೆ ಸಂಬAದಿಸಿದ ಫಲಾನುಭವಿ ಆಧಾರಿತ ಯೋಜನೆಗಳಾದ ಮೀನು ಕೃಷಿ ಕೊಳ ನಿರ್ಮಾಣ, ಬಯೋಫ್ಲಾಕ್ ಮಾದರಿಯಲ್ಲಿ ಮೀನು ಕೊಳಗಳ ನಿರ್ಮಾಣ, ಮೀನುಮರಿ ಉತ್ಪದನಾ ಕೇಂದ್ರ ಅಥವಾ ಪಾಲನಾ ಕೇಂದ್ರಗಳ ಸ್ಥಾಪನೆ, ಶೀತಲ ಗೃಹ ನಿರ್ಮಾಣ, ಆರ್.ಎ.ಎಸ್. ಘಟಕ ಸ್ಥಾಪನೆ. ಮಂಜುಗಡ್ಡೆ ಸ್ಥಾವರ ನಿರ್ಮಿಸುವುದು, ಅಲಂಕಾರಿಕ ಮೀನು ಉತ್ಪಾದಕ ಘಟಕ, ಮೀನು ಆಹಾರ ಉತ್ಪಾದನಾ ಘಟಕ, ಹಾಗೂ ವಿವಿಧ ಜಿಲ್ಲಾ ಪಂಚಾಯಿತಿ ಯೋಜನೆಗಳಡಿ ಘಟಕ ವೆಚ್ಚದ ಮೇಲೆ ಸಾಮಾನ್ಯ ಫಲಾನುಭವಿಗಳಿಗೆ ಶೇ:೪೦ ರಷ್ಟು ಹಾಗೂ ಪರಿಶಿಷ್ಟ ಜಾತಿ/ ಪ.ಪಂಗಡ/ ಮಹಿಳಾ ಫಲಾನುಭವಿಗಳಿಗೆ ಶೇ:೬೦ ರಷ್ಟು ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಅರ್ಜಿಯನು ಮೀನುಗಾರಿಕೆ ಇಲಾಖೆ ಕಚೇರಿಯಲ್ಲಿ ಪಡೆದು ಭರ್ತಿಮಾಡಿ ದಿನಾಂಕ:೧೫-೦೫-೨೦೨೧ ರೊಳಗೆ ಸಲ್ಲಿಸಬೇಕು. ೨೦೨೧-೨೨ ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಕೇಂದ್ರ, ವಲಯ, ರಾಜ್ಯವಲಯ ಹಾಗೂ ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆ ಕಿಟ್‌ಗಳ ಖರೀದಿ, ಮೀನುಮರಿ ಖರೀದಿಗೆ ಹಾಗೂ ಯೋಜನೆಗಳಿಗೆ ಸಹಾಯಧನ ಪಡೆಯಲು ಆಸಕ್ತ ಒಳನಾಡು ಮೀನುಗಾರರು ಸಂಬAಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಬೇಕು
ಹೆಚ್ಚಿನ ಮಾಹಿತಿಗಾಗಿ ವಿಜಯಪುರ, ಸಿಂದಗಿ, ಹಾಗೂ ಇಂಡಿ ತಾಲ್ಲೂಕಿನ ಫಲಾನುಭವಿಗಳು, ತಾಲ್ಲೂಕಾ ಮಟ್ಟದ ಅಧಿಕಾರಿಯಾದ ಮೀನುಗಾರಿಕೆ ಸಹಾಯಕ ನಿರ್ದೇಶಕರು ವಿಜಯಪೂರಮೊ. ಸಂ: ೯೪೮೦೮೨೨೯೭೪ ರವರನ್ನು ಸಂಪರ್ಕಿಸಬಹುದು. ಅದರಂತೆ ಮುದ್ದೇಬಿಹಾಳ, ಬ.ಬಾಗೇವಾಡಿ ತಾಲ್ಲೂಕಿನ ಫಲಾನುಭವಿಗಳು, ಮೀನುಗಾರಿಕೆ ಸಹಾಯಕ ನಿರ್ದೇಶಕರು ಮುದ್ದೇಬಿಹಾಳ ಮೊ. ಸಂ: ೯೪೮೦೮೨೨೯೭೫ ರವರನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply