BengaluruState

ರಾಜ್ಯದಲ್ಲಿ ಮುಂದುವರೆದ ಕೊರೊನಾ ಮರಣ ಮೃದಂಗ


ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾರ ಮುದು ವರದಿದ್ದು ಒಂದೇ ದಿನದಲ್ಲಿ 26962 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1274959 ಕ್ಕೆ ಏರಿಕೆಯಾಗಿದೆ.

ಕೊರೊನಾ ಮರಣ ಮೃದಂಗ ಮುಂದುವರೆದಿದ್ದು ಕಿಲ್ಲರ್ ಕೊರೋನಾಗೆ ರಾಜ್ಯದಲ್ಲಿ ಬರೋಬ್ಬರಿ 190 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 14075 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ 124 ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5574 ಕ್ಕೆ ಏರಿಕೆಯಾಗಿದೆ.


Leave a Reply