BengaluruState

ಕೋವಿಡ್ ವಿರುದ್ಧ ಗೆದ್ದು ಬಂದ ಎಚ್ಡಿಕೆ


ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಹಂಚಿಕೊಮಡಿರುವ ಅವರು ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಹೇಳಿದ್ದಾರೆ.


Leave a Reply