BengaluruState

ನ್ಯಾಯಾಧೀಶ ನ್ಯಾ.ಮೋಹನ್ ಎಂ ಶಾಂತನಗೌಡರ್ ಇನ್ನಿಲ್ಲ


ಬೆಂಗಳೂರು: ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ ಶಾಂತನಗೌಡರ್ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶ್ವಾಸಕೋಶದ ಸೋಂಕಿನಿಂದ ಗುರಂಗಾವ್ ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದ ಜಸ್ಟೀಸ್ ಶಾಂತನಗೌಡರ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅವರಿಗೆ 62 ವರ್ಷವಾಗಿತ್ತು. ಮಧ್ಯರಾತ್ರಿ 12.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕರ್ನಾಟಕ ಹಾವೇರಿ ಜಿಲ್ಲೆಯವರಾದ ಮೋಹನ್ ಶಾಂತನಗೌಡರ್ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು. 2017ರ ಫೆಬ್ರವರಿ 17ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದಿದ್ದರು.

 


Leave a Reply