Belagavi

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ


ಬೆಳಗಾವಿ, ಏ.೨೬: ಕೋವಿಡ್-೧೯ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಕಾರಣ ಹಾಗೂ ಸರ್ಕಾರ ಲಾಕ್‌ಡೌನ್ ವಿಧಿಸಿರುವ ಹಿನ್ನಲೆಯಲ್ಲಿ ಏಪ್ರಿಲ್ ೨೭ ರಿಂದ ನಿಗದಿಯಾಗಿದ್ದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಏಪ್ರಿಲ್ ೨೭ರಿಂದ ಪ್ರಾರಂಭವಾಗಬೇಕಿದ್ದ ಮಾರ್ಚ್/ ಏಪ್ರಿಲ್/ ಮೇ ೨೦೨೧ರ ಎಲ್ಲಾ ಸ್ನಾತಕ/ಸ್ನಾತಕೋತ್ತರ/ಎಂಬಿಎ ಪರೀಕ್ಷೆಗಳನ್ನು ವಿಶ್ವವಿದ್ಯಾಲಯ ಸರ್ಕಾರದ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮುಂದೂಡಿದೆ.
ಮುಂದೂಡಲಾದ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಎಲ್ಲಾ ಮಹಾವಿದ್ಯಾಲಯಗಳಿಗೆ ತಿಳಿಸಲಾಗುವುದು ಹಾಗೂ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಎಸ್.ಎಂ.ಹುರಕಡ್ಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply