BengaluruState

18-45 ವರ್ಷದೊಳಗಿನವರಿಗೆ ಉಚಿತ ಕೋವಿಡ್ ಲಸಿಕೆ: ಸಿಎಂ ಬಿಎಸ್ವೈ


ಬೆಂಗಳೂರು: 18 ರಿಂದ 45 ವರ್ಷದೊಳಗಿನ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುವುದಾಗಿ ರಾಜ್ಯ ಸರಕಾರ ಘೋಷಣೆ ಮಾಡಿದೆ.  ಈ ಕುರಿತು ಸ್ಪಷ್ಟನೆ ನೀಡಿದ ಮುಖ್ಯಬಮಂತ್ರಿ ಬಿ.ಎಸ್ ಯಡಿಯೂರಪ್ಪ ಸರಕಾರ ಉಚಿತವಾಗಿ ಲಸಿಕೆ ನೀಡುತ್ತಿದ್ದು ಸಾರ್ವಜನೀಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್, ರೆಮ್‍ಸಿಡಿವಿರ್ ಔಷಧಿಯ ಕೊರತೆ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ 300 ಮೆಟ್ರಿಕ್ ಟನ್ ಬೇಡಿಕೆ ಇದೆ. ಕೇಂದ್ರ ಸರ್ಕಾರ 800 ಮೆಟ್ರಿಕ್ ಟನ್ ಪೂರೈಕೆ ಮಾಡಲು ಒಪ್ಪಿಕೊಂಡಿದೆ. ​ಹೀಗಾಗಿ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, 50 ಸಾವಿರದಿಂದ 1 ಲಕ್ಷದವರೆಗೆ ರೆಮ್‍ಡಿಸಿವರ್ ಲಸಿಕೆ ಪೂರೈಸಲು ಕೇಂದ್ರ ಸಮ್ಮತಿಸಿದೆ. ಕೋವಿಡ್ ಸೋಂಕಿತರಿಗೆ ಇದು ಸಂತಸದ ಸುದ್ದಿಯಾಗಿದೆ. ರಾಜ್ಯ ಸರ್ಕಾರ ಶಕ್ತಿ ಮೀರಿ ಕೋವಿಡ್ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದೆ. ಸಾರ್ವಜನಿಕರು ಕೂಡ ಇದಕ್ಕೆ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.

ಜನವರಿ 16ರಿಂದ ದೇಶಾದ್ಯಂತ ಬೃಹತ್ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಅಭಿಯಾನದ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೊನಾ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಿಬ್ಬಂದಿಗೆ ಲಸಿಕೆ ನೀಡಲಾಗಿತ್ತು. ಅಭಿಯಾನದ ಎರಡನೇ ಹಂತದ ಮೊದಲ ಭಾಗದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಎರಡನೇ ಭಾಗದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿತ್ತು.

ಮೂರನೇ ಹಂತದ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು ಎಂದು ಪ್ರಧಾನಿ ಘೋಷಿಸಿದ್ದರು. ಈ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ತಮ್ಮ ರಾಜ್ಯದ ಜನರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುವ ಘೋಷಣೆ ಮಾಡಿದ್ದವು. ಇದೀಗ ಕರ್ನಾಟಕ ಸರ್ಕಾರವೂ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿದೆ.

 

 

 

 


Leave a Reply