BelagaviState

ವಿದ್ಯಾರ್ಥಿಗಳಿಗೆ ಬಿಗ್ ಶಾಕ್, ನಾಳೆ ರಾಣಿ ಚೆನ್ನಮ್ಮ ವಿವಿ ಪರೀಕ್ಷೆಗಳಿಲ್ಲ


ಬೆಳಗಾವಿ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಮೇಲೂ ಕೊರೊನಾ ಕರಾಳ ಛಾಯೆ ಆವರಿಸಿದೆ.  ರಾಜ್ಯ ಸರ್ಕಾರ ಜನತಾ ಕರ್ಫೂ ಜಾರಿಗೊಳಿಸಿದ ಹಿನ್ನೆಲೆ ಮತ್ತು ನಾಳೆಯಿಂದ ನಡೆಯಬೇಕಿದ್ದ ಪದವಿ, ಸ್ನಾತಕ, ಸ್ನಾತಕೋತ್ತರ  ಮತ್ತು ಎಂಬಿಎ ಪರೀಕ್ಷೆಗಳನ್ನು ಮುಂದೂಡಿ ನೋಟಿಸ್ ಜಾರಿಗೊಳಿಸಿದೆ.

ನಾಳೆಯಿಂದ ಪರೀಕ್ಷೆಗಳು ಪ್ರಾರಂಭವಾಗುತ್ತವೆ ಎಂದು ಹಗಲು ರಾತ್ರಿ ಎನ್ನದೇ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದ ವಿದ್ಯಾರ್ಥಿಗಳಿಗೆ ವಿವಿ ಆದೇಶ ಶಾಕ್ ನೀಡಿದ್ದು ಏ.27ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಿ ಆದೇಶ ಹೊರಡಿಸಲಾಗಿದೆ. ಕೊರೊನಾ ಸೊಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಮೇರೆಗೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.


Leave a Reply