karanataka

ಜಿಲ್ಲಾ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳ ನೇಮಕ


ಬೆಂಗಳೂರು : ರಾಜ್ಯದ ಜಿಲ್ಲಾ ಪಂಚಾಯತ್ ಗಳ ಆಡಳಿತ ಅವಧಿಯು 2021 ರ ಮೇ ಜೂನ್ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದ್ದು ರಾಜ್ಯದ ಜಿಲ್ಲಾ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ನವೀನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪಂಚಾಯತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣದಲ್ಲಿ 321 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಅವಧಿ ಮುಕ್ತಾಯವಾಗುವ ಮರು ದಿನದ ದಿನಾಂಕದಿಂದ ಜಾರಿಗೆ ಬರುವಂತೆ ಜಿಲ್ಲಾ ಪಂಚಾಯತಿಗಳಿಗೆ ಸಂಬಂಧ ಪಟ್ಟ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೇಮಕಗೊಂಡ ಆಡಳಿತಾಧಿಕಾರಿಗಳ ಅವಧಿಯು ಸಂಬಂಧಿಸಿದ ಜಿಲ್ಲಾ ಪಂಚಾಯತ್ ಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿಯುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇರತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 


Leave a Reply