Belagavi

ದಿ.ಸುರೇಶ ಅಂಗಡಿ ಪತ್ನಿಗೂ ಕೊರೊನಾ ಪಾಸಿಟಿವ್


ಬೆಳಗಾವಿ: ಬೆಳಗಾವಿ ಲೋಕ ಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಿ.ಸುರೇಶ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೂ ಕೊರೊನಾ ದೃಡಪಟ್ಟಿದೆ

ಈ ಕುರಿತು ಫೇಸ್‍ಬುಕ್‍ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು,  ರೋಗದ ಲಕ್ಷಣಗಳು ಇಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿರುವೆ. ನನ್ನ ಸಂಪರ್ಕಕ್ಕೆ ಬಂದವರು ಸಹ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸದ್ಯ ಅವರು ಬೆಳಗಾವಿ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕ್ವಾರಂಟೈನ್‍ ಆಗಿದ್ದಾರೆ.


Leave a Reply