BelagaviState

ಚಿಕ್ಕೋಡಿಯಲ್ಲಿ ಕೋವಿಡ್ ಸೋಂಕಿತರಿಗಾಗಿ 120 ಬೆಡ್ ಗಳು ಮೀಸಲು


ಚಿಕ್ಕೋಡಿ: ಸಮೀಪದ ಅಂಕಲಿ ಪಟ್ಟಣದ ಡಾ.ಎನ್.ಎ. ಮಗದುಮ್ ಆಯುರ್ವೇದಿಕ ಮೆಡಿಕಲ್ ಆಸ್ಪತ್ರೆ ಮತ್ತು ಸಂಶೋದನಾ ಕೇಂದ್ರದಲ್ಲಿ 120 ಬೆಡ್ ಗಳನ್ನು ಕೋವಿಡ್ ಸೋಂಕಿತರಿಗಾಗಿ ಮೀಸಲಿಡಲಾಗಿದ್ದು, ಈ ಯೋಜನೆಗೆ ಇಂದು ಚಾಲನೆ ನೀಡಲಾಯಿತು.

ಕೋವಿಡ್ ನಿಗ್ರಹಕ್ಕಾಗಿ ಆಸ್ಪತ್ರೆಯೊಂದಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ಹಾಗೂ ಪ್ರಕಾಶ ಹುಕ್ಕೇರಿ ಮತ್ತು ಶಾಸಕ ಗಣೇಶ ಹುಕ್ಕೇರಿ ಅವರ ಅನ್ನಪೂರ್ಣೇಶ್ವರಿ ಫೌಂಡೇಶನ್ ಕೂಡ ಕೈಜೋಡಿಸಿ ಕೆಲಸ ಮಾಡುತ್ತಿದ್ದು ಕೊರೊನಾ ಮುಕ್ತ ನಗರ ಮಾಡುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಗಣೇಶ ಹುಕ್ಕೇರಿ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮಣ್ಣವರ, ಮಾಜಿ ಸಚಿವ ವೀರಕುಮಾರ ಪಾಟೀಲ, ಎಸ್.ಬಿ. ಘಾಟಗೆ ಮಹಾವೀರ ಮೊಹಿತೆ, ಲಕ್ಷ್ಮಣರಾವ್ ಚಿಂಗಳೆ, ಡಾ.ಎಸ್.ಎಸ್. ಗಡೇದ ಸೇರದಂತೆ ಇತರರು ಇದ್ದರು.


Leave a Reply