BengalurukaranatakaState

ನಿಮ್ಮ ಸಹಕಾರದಿಂದ ಮಾತ್ರ ಕೊರೊನಾ ಗೆಲ್ಲಲು ಸಾಧ್ಯ: ಬಸವರಾಜ ಬೊಮ್ಮಾಯಿ


ಬೆಂಗಳೂರು : ರಾಜ್ಯ ಸರಕಾರ ಹೊರಡಿಸಿರುವ ಟಫ್ ರೂಲ್ಸ್ ಗಳು ಇಂದು ರಾತ್ರಿಯಿಂದಲೇ ಆರಂಭವಾಗಲಿದ್ದು ಈ 14 ದಿನಗಳವರೆಗೆ ಸಾತವಜನೀಕರು ಸ್ವಯಂ ಪ್ರೇರಿತರಾಗಿ ನಿಯಮಗಳನ್ನು ಪಾಲಿಸಬೇಕು ಅಂದಾಗ ಮಾತ್ರ  ಕೊರೊನಾ ಎದುರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಜನರ ಸಂಪೂರ್ಣ ಸಹಕಾರವನ್ನು ಬಯಸುತ್ತೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

ಇಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಸರ್ಕಾರ ಕೈಗೊಂಡಿರುವ ಈ ಬಿಗಿ ಕ್ರಮಗಳನ್ನು ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ರಾಜ್ಯದ ಜನರ ಮೇಲಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ಬಿಗಿ ಕ್ರಮ ಕೈಗೊಳ್ಳುವ ನಿರ್ಧಾರ ಜಾರಿಗೊಳಿಸಲಾಗಿದೆ. ಈ ಬಿಗಿ ಕ್ರಮಕ್ಕೆ ಜನ ಸ್ವಯಂ ಪ್ರೇರಣೆಯಿಂದ ಸ್ಪಂದಿಸಬೇಕಾದ ಅವಶ್ಯಕತೆಯಿದೆ. ಇದರಿಂದ ಕೊರೊನಾ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧ್ಯ ಎಂದರು.

ಕರ್ಪ್ಯೂ ಅವದಿಯಲ್ಲಿ  ಪ್ರತಿಯೊಬ್ಬರು ಜಾಗೃತರಾಗಿರಬೇಕು. ನಮ್ಮ ಆರೋಗ್ಯದ ಜೊತೆ ಇತರರ ಆರೋಗ್ಯವೂ ಮುಖ್ಯ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಸರಕಾರ ಹೊರಡಿಸಿರುವ ಆದೇಶಕ್ಕೆ ಸ್ಪಂಧಿಸಬೇಕೆಂದು ಮನವಿ ಮಾಡಿದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರ್ಫ್ಯೂ ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

 


Leave a Reply