Bengalurukaranataka

ಲಾಕ್ ಡೌನ್ 14 ದಿನಕ್ಕೆ ಮುಗಿಯಲ್ಲಾ, ಮುಂದುವರೆಯುತ್ತದೆ ಎಂದು ಸುಳಿವು ಕೊಟ್ಟ ಎಸ್.ಟಿ ಸೋಮಶೇಖರ್


ಮೈಸೂರು: ತಜ್ಞರ ಸಲಹೆ ಮೇರೆಗೆ ರಾಜ್ಯ ಸರ್ಕಾರ ಹದಿನಾಲ್ಕು ದಿನ ಲಾಕ್‌ಡೌನ್‌ ಘೋಷಣೆ ಮಾಡಿದೆ‌. ಕೊರೊನಾ ಚೈನ್ ಲಿಂಕ್ ಕಟ್ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ‌. ಜನರು ಸ್ಪಂದಿಸದೆ ಇದ್ದರೆ ಮುಂದೆಯೂ ಲಾಕ್‌ಡೌನ್‌ ಮಾಡಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ವಿಧಿಸಿರುವ ಲಾಕ್‌ಡೌನ್‌ ಮುಂದುವರೆಯುವ ಬಗ್ಗೆ ಸಚಿವ ಎಸ್.ಟಿ ಸೋಮಶೇಖರ್ ಸುಳಿವು ನೀಡಿದ್ದಾರೆ.

ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್‌ ಮುಂದುವರಿಕೆ ಅನಿವಾರ್ಯತೆ ಆಗಬಹುದು ಎಂದು ಹೇಳುವ ಮೂಲಕ ಮತ್ತೊಂದು ವಾರ ಲಾಕ್‌ಡೌನ್‌ ಸುಳಿವು ಕೊಟ್ಟಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಸರಕಾರ ಸನತಾ ಕರ್ಪ್ಯೂ ಮಾಡಿದ್ದು  ಜನರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಲಾಕ್‌ಡೌನ್‌ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ‌10 ರವರೆಗೆ ಮಾತ್ರ ವಿನಾಯಿತಿ ನೀಡಲಾಗಿದೆ ಅದಾದ ನಂತರ ಯಾರೇ ಬಂದರೂ ಕಠಿಣ ಕ್ರಮ ಜರುಗಿಸಿ, ಇಲ್ಲವಾದರೆ ಪೊಲೀಸರು ಇದಕ್ಕೆ ಹೊಣೆಗಾರರಾಗುತ್ತಾರೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಸೂಚನೆ ನೀಡಿದರು.

 


Leave a Reply