Koppal

ಜ.09 ರಂದು ಸಚಿವರಾದ ಸಿ.ಸಿ.ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಜ.08 : ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ್ ಅವರು ಜನವರಿ.09 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 08.30 ಗಂಟೆಗೆ ನರಗುಂದದಿAದ ನಿರ್ಗಮಿಸಿ ಗದಗ ಮಾರ್ಗವಾಗಿ ರಸ್ತೆ ಮೂಲಕ ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 11 ಗಂಟೆಯಿAದ 12.30 ರವರೆಗೆ ಕುಕನೂರು ತಾಲ್ಲೂಕಿನ ಭಾನಾಪುರ ಗ್ರಾಮಕ್ಕೆ ತೆರಳಿ ಮುಖ್ಯಮಂತ್ರಿಗಳು ಕೃಷಿ ಇಲಾಖೆಯಿಂದ ಆಯೋಜಿಸಿರುವ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಚಾಲನೆ ನೀಡುವ ಮತ್ತು ಆಟಿಕೆ ಕ್ಲಸ್ಟರ್‌ನ ಭೂಮಿ ಪೂಜೆ ನೆರವೇರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 01.30 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಕುಷ್ಟಗಿ, ಇಲಕಲ್ ಮಾರ್ಗವಾಗಿ ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಸಿ.ವಿರುಪಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply