BengaluruState

ಸಾವಿನ ಸಂಖ್ಯೆ ಹೆಚ್ಚಾಗಲು ಸರಕಾರವೇ ಕಾರಣ: ಸಿದ್ದರಾಮಯ್ಯ


ಬೆಂಗಳೂರು: ಸರ್ಕಾರ ಕೊರೊನಾ ಇಂದ ಸಾವಿಗೀಡಾದ ಜನರ ನಿಜ ಲೆಕ್ಕವನ್ನು ಮುಚ್ಚಿಟ್ಟು, ಜನರಿಗೆ ಸುಳ್ಳು ಹೇಳುತ್ತಿದೆ. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಬಿಡುಗಡೆ ಮಾಡುವ ಮೃತರ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಸರ್ಕಾರ ಅಗತ್ಯ ವೈದ್ಯಕೀಯ ಸೌಲಭ್ಯ ನೀಡಿದ್ದರೆ ಜನ ಹೀಗೆ ಸಾಯುವ ಸನ್ನಿವೇಶ ಬರುತ್ತಿತ್ತಾ?” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಗುರುವಾರ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. ಕೋವಿಡ್ ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

“ರೋಗಿಗಳಿಗೆ ಆಕ್ಸಿಜನ್, ಐಸಿಯು ಹಾಸಿಗೆಗಳು, ಆಂಬುಲೆನ್ಸ್ ಗಳು ಅಗತ್ಯ ಸಮಯದಲ್ಲಿ ಸಿಗುತ್ತಿಲ್ಲ ಎಂದು ಸತ್ಯ ಹೇಳಿದರೆ ಬಿಜೆಪಿ ನಾಯಕರು ನಾನು ಟೀಕೆ ಮಾಡುತ್ತಿದ್ದೇನೆ ಅಂತಾರೆ. ಶವ ಸಂಸ್ಕಾರ ಮಾಡಲು ಕ್ಯೂನಲ್ಲಿ ನಿಲ್ಲಬೇಕಾದ, ಲಂಚ ಕೊಡಬೇಕಾದ ಪರಿಸ್ಥಿತಿ ಇದೆ. ಇದು ಸುಳ್ಳಾ? ಇದನ್ನು ಹೇಳಿದ್ರೆ ಟೀಕೆಯಾಗುತ್ತಾ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 


Leave a Reply