karanatakaState

ಗುಟಕಾಗಾಗಿ ದೋಸ್ತಿಯಲ್ಲಿ ಧುಶ್ಮನ್, ನಡು ರೋಡಲ್ಲೇ ಹೊಡೆದಾಟ


ಹುಬ್ಬಳ್ಳಿ: ಅಂಗಡಿಯಲ್ಲಿ ದುಪ್ಪಟ್ಟು ದರಕ್ಕೆ ಗುಟ್ಕಾ ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿ ಅಂಗಡಿ ಮಾಲೀಕರು ಮತ್ತು ಗ್ರಾಹಕರು ಹೊಡೆದಾಡಿಕೊಂಡಿರುವ ಘಟನೆ ನಗರದ ಬಾರದಾನ ಸಾಲ ಗಲ್ಲಿಯಲ್ಲಿ ಇತ್ತೀಚೆಗೆ ನಡೆದಿದ್ದು ಇದರ ವೀಡಿಯೋ ವೈರಲ್‌ ಆಗಿದೆ.

ಕರ್ಫ್ಯೂ ಹಿನ್ನೆಲೆಯಲ್ಲಿ ಅಂಗಡಿ ಮುಗ್ಗಟ್ಟುಗಳೆಲ್ಲ ಬಂದ್‌ ಆಗಿವೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಪಾನ್‌ಶಾಪ್‌ನವರು ದುಪ್ಪಟ್ಟು ದರಕ್ಕೆ ಗುಟುಕಾ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಗುಟುಕಾ ಕೊಳ್ಳಲು ಬಂದ ನಾಲ್ಕೈದು ಜನ ಯುವಕರು ಹಾಗೂ ಅಂಗಡಿ ಮಾಲೀಕರ ನಡುವೆ ಜಗಳ ಶುರುವಾಗಿದ್ದು ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದ ಜಗಳದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದು ಇದೀಗ ಸಾಮಾಜೀಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.


Leave a Reply