Belagavi

ಸ್ವಯಂಪ್ರೇರಿತರಾಗಿ ಕೋವಿಡ್ ಲಸಿಕೆ ಪಡೆಯಿರಿ, ಸುರಕ್ಷಿತವಾಗಿರಿ


ಚಿಕ್ಕೋಡಿ: ಸ್ಥಳೀಯ ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ, ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದ ಸಚಿವೆ ಶಶಿಕಲಾ ಜೋಲ್ಲೆ.

ಬಳಿಕ ಕೊರೋನಾ ವಾರಿಯರ್ಸ್ ಗಳಾಗಿ ಆಸ್ಪತ್ರೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯರು, ದಾದಿಯರು ಹಾಗೂ ಎಲ್ಲಾ ಸಿಬ್ಬಂದಿ ವರ್ಗಕ್ಕೆ ಧನ್ಯವಾದ ಸಲ್ಲಿಸಲಾಯಿತು.

ಕೊರೊನಾ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಎಲ್ಲರೂ ತಪ್ಪದೇ ಕೋವಿಡ್ ಲಸಿಕೆ ಪಡೆದು ಸುರಕ್ಷಿತರಾಗಿರಿ. ಲಸಿಕೆ ಹಾಕಿಸಿಕೊಳ್ಳುವುದರಿಂದ ಸೋಂಕಿನ ತೀವ್ರತೆ ಕಡಿಮೆ ಮಾಡಲು ಸಾಧ್ಯ. ಯಾರೂ ಭಯ ಪಡುವ ಅಗತ್ಯವಿಲ್ಲ. ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಂಡು, ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ.
(ವರದಿ ಈರಣ್ಣಾ ಹುಲ್ಲೂರ)


Leave a Reply