Belagavi

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗ್ರಾಮ ಸ್ವಚ್ಚತಾ ಕಾರ್ಯ


ಯರಗಟ್ಟಿ: ಸಮೀಪದ ಮುಗಳಿಹಾಳ ಗ್ರಾಮದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜರುಗಿತು.

ಹೌದು ದಿನ ದಿಂದ ದಿನಕ್ಕೆ ಹಲವಾರು ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವುದರಿಂದ ಅದರಲ್ಲೂ ಮಹಾಮಾರಿ ಕೋರೋನಾ ರೋಗವು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆ ಗ್ರಾಮದಲ್ಲಿ ಕೋಳಚೆ ನೀರು ನಿಂತು ಸೊಳ್ಳೆಗಳು ಹೆಚ್ಚಾಗಿ ಯಾವುದೇ ರೋಗವು ಬಾರದಂತೆ ಮುನ್ನೆಚ್ಚರಿಕೆ ವಾಗಿ ಗ್ರಾಮವನ್ನು ಗ್ರಾಮ ಪಂಚಾಯತಿ ವತಿಯಿಂದ ಸ್ವಚ್ಚತಾ ಮಾಡಲಾಯಿತು.

ಮುಗಳಿಹಾಳ ಗ್ರಾಮದ ವಿವಿದ ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಜರ್ ಸಿಂಪಡಣೆ ಮಾಡಲಾಯಿತು. ಒಟ್ಟಾರೆ ಗ್ರಾಮದ ಜನರ ಮಾತಿಗೆ ಸ್ಪಂದಿಸಿ ಗ್ರಾಮವನ್ನು ಸ್ವಚ್ಚ ಗೋಳಿಸಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯತಿ ಸರ್ವ ಸದಸ್ಯರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
(ವರದಿ ಈರಣ್ಣಾ ಹುಲ್ಲೂರ ಯರಗಟ್ಟಿ)


Leave a Reply