Koppal

ಮತದಾರರ ತೀರ್ಪು ಕಾಂಗ್ರೇಸ್ ಪರವಾಗಿದೆ


ಕುಷ್ಠಗಿ:ಉಪಚುನಾವಣೆ ಯಲ್ಲಿ ಮಸ್ಕಿ ಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಮಾದ್ಯಮದವರೊಂದಿಗೆ ಕುಷ್ಠಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಚುನಾವಣಾ ಫಲಿತಾಂಶ ದ ಬಗ್ಗೆ ಮಾತನಾಡಿದರು.ಇಂದು ಐದು ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಕೆಲವು ಭಾಗಗಳಲ್ಲಿ ಸೋತಿರಬಹುದು ,ಆದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತದಾರರು ಒಲವು ತೋರಲಿದ್ದಾರೆ.ಮಸ್ಕಿ ಚುನಾವಣಾ ಜವಾಬ್ದಾರಿ ನನಗೆ ನೀಡಿದ ಹಿನ್ನೆಲೆಯಲ್ಲಿ ನಾನು ಕ್ಷೇತ್ರದ ಉದ್ದಗಲಕ್ಕೂ ತಿರುಗಿದ್ದೇನೆ.ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮತದಾರರು ನಮಗೆ ಭರವಸೆ ಇವತ್ತು ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸನಗೌಡ ಆರ್ ತುರ್ವಿಹಾಳ ರವರ ಗೆಲುವು ನಿಂದ ತಿಳಿದಿದೆ.ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ, ದೇಶ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ.ಪಕ್ಷದ ರಾಷ್ಟೀಯ ಅದ್ಯಕ್ಷರಾದ ಸೋನಿಯಾ ಗಾಂಧಿ, ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ,ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ,ಕಾಂಗ್ರೆಸ್ ಪಕ್ಷದ ರಾಜ್ಯಾದ್ಯಕ್ಷರಾದ ಡಿ ಕೆ ಶಿವಕುಮಾರ ಹಾಗೂ ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ರವರ ಮಾರ್ಗದರ್ಶನದಲ್ಲಿ ಮತ್ತು ಅವರ ನಿರಂತರ ಪಕ್ಷ ಸಂಘಟನೆಯಿಂದ ನಮ್ಮ ಪಕ್ಷದ ಅಭ್ಯರ್ಥಿ ಗೆಲವು ಸಾಧಿಸಿದ್ದಾರೆ.ನನಗೆ ಪಕ್ಷ ನೀಡಿದ ಜವಾಬ್ದಾರಿ ಯನ್ನು ಸರಿಯಾಗಿ ನಿಭಾಯಿಸಿದ್ದೇನೆ ಎನ್ನುವ ತೃಪ್ತಿ ನನಗಿದೆ ಎಂದರು. ತಳ ಮಟ್ಟದ ಕಾರ್ಯಕರ್ತರ ಪರಿಶ್ರಮದಿಂದ ,ಇಂದು ಮಸ್ಕಿಯಲ್ಲಿ ಜಯಗಳಿಸಿದ್ದೇವೆ.ಮುಂದಿನ ದಿನಗಳಲ್ಲಿ ಇನ್ನಷ್ಟು ಪಕ್ಷ ಸಂಘಟನೆಯ ಮೂಲಕ ರಾಜ್ಯ ಹಾಗೂ ರಾಷ್ಟ ಮಟ್ಟದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.


Leave a Reply