BelagaviState

ಸಂಪಾದಕ ಮಾಯಪ್ಪ ಮಾವರ್ಕರ್ ನಿಧನ : ಪತ್ರಿಕಾ ವೃಂದದಿಂದ ಸಂತಾಪ


ಬೆಳಗಾವಿ : ಬೆಳಗಾವಿಯ ಲೋಕವಾರ್ತೆ ದಿನಪತ್ರಿಕೆಯ ಸಂಪಾದಕ ಮಾಯಪ್ಪ ಮಾವರಕರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಉತ್ತರ ಕರ್ನಾಟಕ ಮತ್ತು ಬೆಳಗಾವಿ ಜಿಲ್ಲಾ ದಿನಪತ್ರಿಕೆಗಳ ಸಂಪಾದಕರ ಸಂಘದ ಉಪಾಧ್ಯಕ್ಷರೂ ಆಗಿದ್ದ ಮಾವರ್ಕರ್ ಅವರು ಸಂಪಾದಕರ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ಲೋಕವಾರ್ತೆ ಮತ್ತು ಲೋಕ ಕ್ರಾಂತಿ ಎಂಬ 2 ದಿನ ಪತ್ರಿಕೆಗಳನ್ನು ನಡೆಸುತ್ತಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು, ಓರ್ವ ಪುತ್ರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟಗಲಿದ್ದಾರೆ.

ಅವರ ನಿಧನದಿಂದ ಆಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಸರ್ವಶಕ್ತನಾದ ಭಗವಂತನು ಅವರ ಕುಟುಂಬದವರಿಗೆ ನೀಡಲಿ ಎಂದು ಮತ್ತು ಮಾಯಪ್ಪ ಮಾವರಕರ ಅವರ ಆತ್ಮಕ್ಕೆ ಚಿರ ಶಾಂತಿಯನ್ನು ದಯಪಾಲಿಸಲಿ ಎಂದು ಬೆಳಗಾವಿ ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ಪರವಾಗಿ ಮತ್ತು ಕರ್ನಾಟಕ ಪತ್ರಕರ್ತರ ಸಂಘದ ಪರವಾಗಿ, ಕರ್ನಾಟಕ ಪತ್ರಕರ್ತರ ವಿವಿಧೋದ್ದೇಶಗಳ ಸಹಕಾರಿ ಸಂಘದ ಪರವಾಗಿ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಟ್ರಸ್ಟ್ ಪರವಾಗಿ ಮತ್ತು ಜಿಲ್ಲೆಯ ಸಮಸ್ತ ಪತ್ರಕರ್ತರ ಪರವಾಗಿ ಬೆಳಗಾವಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಮುರುಗೇಶ ಶಿವಪೂಜಿ ಅವರು ಕಂಬನಿ ಮಿಡದಿದ್ದು ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.


Leave a Reply