BengaluruState

ಬೆಂಗಳೂರಿನಲ್ಲಿ ವ್ಯಾಕ್ಸಿನ್‌ಗಾಗಿ ಅಲೆದಾಟ


ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ವ್ಯಾಕ್ಸಿನ್‌ಗಾಗಿ ಅಲೆದಾಟ ಆರಂಭವಾಗಿದೆ. ಕೊರೊನಾಗೆ ಮೊದಲ ಡೋಸ್ ವ್ಯಾಕ್ಸಿನ್ ಪಡೆದಿರುವ 45 ವರ್ಷ ಮೇಲ್ಪಟ್ಟವರು ಇದೀಗ ಕಾಲಮಿತಿಯಲ್ಲಿ ಎರಡನೇ ಡೋಸ್ ಪಡೆಯಲೇಬೇಕು. ಆದರೆ, ವ್ಯಾಕ್ಸಿನ್ ಸಿಗದೇ ಇದರಿಂದ ತೊಂದರೆಯಾಗಹುದೇ ಎಂಬ ಆತಂಕಕ್ಕೆ ಒಳಗಾಗಿದ್ದಾರೆ. ಎರಡನೇ ಡೋಸ್‌ಗಾಗಿ ಆಸ್ಪತ್ರೆಗಳಿಗೆ ಅಲೆಯುತ್ತಿದ್ದಾರೆ.

ಸರ್ಕಾರದ ಎವಟ್ಟುಗಳು ಒಂದೊಂದಾಗಿ ಹೊರ ಬೀಳುತ್ತಿವೆ. ಕೊರೊನಾ ಸೋಂಕಿತರಿಗೆ ಸೂಕ್ತ ಬೆಡ್ ಮತ್ತು ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರಿಂದ ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಇದೀಗ ವ್ಯಾಕ್ಸಿನ್ ಪಡೆದು ಜೀವ ಉಳಿಸಿಕೊಳ್ಳಲು ಹೋಗುವರು ಇದೀಗ ವ್ಯಾಕ್ಸಿನ್‌ಗಾಗಿ ಪರದಾಡುತ್ತಿದ್ದಾರೆ. ಮೊದಲ ಡೋಸ್ ವ್ಯಾಕ್ಸಿನ್ ಪಡೆದವರು ಇದೀಗ ಕಾಲಮಿತಿಯಲ್ಲಿ ಎರಡನೇ ಡೋಸ್ ಪಡೆಯಲು ಪರದಾಡುತ್ತಿದ್ದಾರೆ. ವ್ಯಾಕ್ಸಿನ್ ಸಿಗದ ಕಾರಣ ಒಂದು ಡೋಸ್ ವ್ಯಾಕ್ಸಿನ್ ಪಡೆದಿರುವ ಕಾರಣ ಏನಾದರೂ ತೊಂದರೆ ಎದುರಾಗಬಹುದೇ ಎಂಬ ಭಯ ಆವರಿಸಿದೆ. ಹೀಗಾಗಿ ದುಡ್ಡು ಕೊಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ವ್ಯಾಕ್ಸಿನ್ ಪಡೆಯಲು ಜನರು ಮುಗಿ ಬಿದ್ದರೂ ವ್ಯಾಕ್ಸಿನ್ ಸಿಗುತ್ತಿಲ್ಲ. ಒಂದಡೆ ಕೊರೊನಾ ಸಾವುಗಳ ಅವಾಂತರ, ಮತ್ತೊಂದಡೆ ವ್ಯಾಕ್ಸಿನ್ ಪರದಾಟ ಆರಂಭವಾಗಿದೆ.


Leave a Reply