Bengaluru

ಚಾಮರಾಜ ನಗರ ದುರಂತಕ್ಕೆ ಸರಕಾರವೇ ಹೊಣೆ ಹೊರಬೇಕು: ಸಿಟಿ ರವಿ


ಬೆಂಗಳೂರು: ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿರುವುದು ಕ್ಷಮೆಗೆ ಅರ್ಹವಲ್ಲದ ಘಟನೆ. ಈ ಘಟನೆಗೆ ಸಚಿವರೇ ಹೊಣೆ ಆಗಿದ್ದರೆ ಅವರೇ ಹೊಣೆ ಹೊತ್ತುಕೊಳ್ಳಬೇಕು, ಅಧಿಕಾರಿಗಳು ಹೊಣೆಯಾಗಿದ್ದರೆ ಅವರೇ ಹೊಣೆ ಹೊತ್ತುಕೊಳ್ಳಬೇಕು, ಒಂದು ವೇಳೆ ನಾನು ಸಚಿವನಾಗಿ ಇಂತಹ ಘಟನೆ ನನ್ನ ಗಮನಕ್ಕೆ ಬಂದು, ನಾನು ಕ್ರಮ ತೆಗೆದುಕೊಳ್ಳದಿದ್ದರೆ ನಾನೇ ಹೊಣೆ ಹೊರಬೇಕು. ಆಕ್ಸಿಜನ್ ಸಮಸ್ಯೆಯಿಂದ ಈ ಘಟನೆಯಾಗಿದ್ದರೆ ಸರ್ಕಾರವೇ ಹೊಣೆ ಹೊರಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಚಾಮರಾಜನಗರ ದುರಂತವನ್ನು, ಸಂಕಷ್ಟವನ್ನು ನೋಡಿದೆ. ಇದು ಘೋರ ಅನ್ಯಾಯ. ಇದಕ್ಕೆ ಯಾರೇ ಹೊಣೆಯಾಗಿದ್ದರು ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.

ಬೇರೆ ರಾಜ್ಯಗಳಲ್ಲಿ ಕೇಳಿ ಬರುತ್ತಿದ್ದ ಇಂತಹ ಘಟನೆ ನಮ್ಮ ರಾಜ್ಯದಲ್ಲೇ ನಡೆದಿರುವುದು ದುರಂತ. ಯಾರೇ ತಪ್ಪಿತಸ್ಥರಿದ್ರೂ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಸಿಎಂಗೆ ಮನವಿ ಮಾಡಿದ್ದೇನೆ. ನನಗೆ ಘಟನೆ ಬಗ್ಗೆ ತಿಳಿದ ತಕ್ಷಣ ಸಿಎಂ ಭೇಟಿ ಮಾಡಿ ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದೇನೆ ಎಂದರು.

 


Leave a Reply