BengaluruState

ನೈತಿಕ ಹೊಣೆ ಹೊತ್ತು ಸಿಎಂ ಮತ್ತು ಸುಧಾಕರ ರಾಜಿನಾಮೆ ನೀಡಲಿ: ಸಿದ್ದರಾಮಯ್ಯ


ಬೆಂಗಳೂರು: ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನರು ಸಾವನ್ನಪ್ಪಿದ ಘಟನೆಗೆ ರಾಜ್ಯದ ಸರ್ಕಾರ, ಜಿಲ್ಲಾಸ್ಪತ್ರೆಯ ಹಾಗೂ ಜಿಲ್ಲಾಡಳಿತವೇ ನೇರ ಹೊಣೆ. ಈ ಕೂಡಲೇ ನೈತಿಕ ಹೊಣೆ ಹೊತ್ತು ಸಿಎಂ ಯಡಿಯೂರಪ್ಪ ಮತ್ತು ಸಚಿವ ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದಿದ್ದಾರೆ.


Leave a Reply